ಕರಾವಳಿ

ಬೆಳ್ಮಣ್ ಸಮೀಪ ಪಲ್ಟಿಯಾದ ಖಾಸಗಿ ಬಸ್ 25 ಪ್ರಯಾಣಿಕರಿಗೆ ಗಾಯ; ತಪ್ಪಿದ ಅನಾಹುತ

Pinterest LinkedIn Tumblr

ಉಡುಪಿ: ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.

ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ಬಸ್ ಕಾರ್ಕಳದಿಂದ ಮಂಗಳೂರು ಕಡೆಗೆ ತೆರಳುತಿತ್ತು. ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ನ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಸುಮಾರು 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಯಾವುದೇ ಸಾವು ಸಂಭವಿಸಿಲ್ಲ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Comments are closed.