ಕರಾವಳಿ

ಹಜ್ ಸಮಿತಿಯಿಂದ ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು -ಲಸಿಕೆ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು, ಜುಲೈ.13: ಮಂಗಳೂರು ಹಜ್ ಸಮಿತಿಯ ವತಿಯಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತೆರಳುವ ಹಜ್‌ಯಾತ್ರಾರ್ಥಿಗಳಿಗೆ ಚುಚ್ಚುಮದ್ದು ಮತ್ತು ಲಸಿಕೆ ನೀಡುವ ಕಾರ್ಯಕ್ರಮವು ಗುರುವಾರ ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಹಜ್ ಸಮಿತಿಯ ಅಧ್ಯಕ್ಷ ಯೆನೆಪೊಯ ಮುಹಮ್ಮದ್ ಕುಂಞಿ, ಯೆನೆಪೊಯ ವಿವಿ ಕುಲಪತಿ ಯೆನೆಪೊಯ ಅಬ್ದುಲ್ಲ ಕುಂಞಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಹಾಜಿ ಎಸ್.ಎಂ.ಆರ್.ರಶೀದ್, ಉದ್ಯಮಿ ಹನೀಫ್ ಹಾಜಿ ಗೋಳ್ತಮಜಲು, ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಬಂದರ್ ಮತ್ತಿತರರು ಉಪಸ್ಥಿತರಿದ್ದರು.

Comments are closed.