ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ನಗ್ನ ಫೊಟೋ ಹಾಕಿದ ಆರೋಪ : ಮೂವರ ಸೆರೆ

Pinterest LinkedIn Tumblr

ಮಂಗಳೂರು, ಜುಲೈ.14 : ಯುವತಿಯ ನಗ್ನ ಫೋಟೋವನ್ನು ಸಾಮಾಜಿಕ ಜಲತಾಣಗಳಲ್ಲಿ ಅಪ್‌ಲೋಡ್ ಮಾಡಿ ವೈರಲ್ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪೊಲೀಸರು ಬಂಧಿಸಿದ್ದಾರೆ.

ಸಂದೇಶ್, ಜಗದೀಶ್ ಮತ್ತು ನವೀನ್ ಬಂಧಿತ ಆರೋಪಿಗಳು.

ಸಂದೇಶ್ ಮೊದಲು ಯುವತಿಯನ್ನು ಪರಿಚಯಿಸಿಕೊಂಡು ಬಳಿಕ ಆಕೆಯ ಜೊತೆಗೆ ಸಲಿಗೆ ಹೆಚ್ಚಿಸಿಕೊಂಡಿದ್ದನಂತೆ. ನಂತರ ಆಕೆಯನ್ನ ಪುಸಲಾಯಿಸಿ ನಗ್ನ ಚಿತ್ರಗಳನ್ನು ಪಡೆದು ತನ್ನ ಸ್ನೇಹಿತರಾದ ಜಗದೀಶ್ ಮತ್ತು ನವೀನ್ ಜೊತೆ ಶೇರ್ ಮಾಡಿದ್ದಲ್ಲದೇ ಸಾಮಾಜಿಕ ಜಾಲತಾಣಕ್ಕೂ ಅಪ್ಲೋಡ್ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ.

ಈತನ ನೀಚ ಕೃತ್ಯ ತಿಳಿದ ಬಳಿಕ ಯುವತಿ ಆತನಿಂದ ದೂರವಾಗಿದ್ದಳಂತೆ. ಫೋಟೋಗಳು ವೈರಲ್ ಆದ ಬಳಿಕ ಪೊಲೀಸರು ವಿಚಾರಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Comments are closed.