ಕರಾವಳಿ

ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಕಾರು : ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್

Pinterest LinkedIn Tumblr

ಬಂಟ್ವಾಳ, ಜುಲೈ. 14: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಸಹಿತ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಗಾಯಗೊಂಡವರು ಮಾರಿಪಳ್ಳ ನಿವಾಸಿಗಳೆಂದು ತಿಳಿದುಬಂದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ತಲಪಾಡಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ರಾ. ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.

Comments are closed.