ಕರಾವಳಿ

ಆಗಸ್ಟ್ 12: ಪಿಲಿಕುಳದಲ್ಲಿ ಆಟಿಕೂಟ ಕಾರ್ಯಕ್ರಮ – ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ

Pinterest LinkedIn Tumblr

ಮಂಗಳೂರು ಜುಲೈ 25 : ಪಿಲಿಕುಳದ ಗುತ್ತು ಮನೆಯಲ್ಲಿ ವಿಜಯಾ ಬ್ಯಾಂಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಆಗಸ್ಟ್ 12 ರಂದು ಪೂರ್ವಾಹ್ನ 10 ಗಂಟೆಯಿಂದ ಪಿಲಿಕುಳ ಆಟಿಕೂಟವನ್ನು ಜಾನಪದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದ ಯಕ್ಷ ಮಂಜುಷಾ ಇವರಿಂದ ಯಕ್ಞಗಾನ ನಾಟ್ಯ ವೈಭವ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಜನಪದ ಹಾಡುಗಳು ನಡೆಯಲಿದೆ. ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಸದಸ್ಯರಿಂದ ಆಟಿಯ ಬಗೆ ಬಗೆಯ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ ಹಾಗೂ ಸವಿ ಹಂಚಿಕೆಯ ಕಾರ್ಯಕ್ರಮವೂ ನಡೆಯಲಿದೆ.

(ಕಡತ ಚಿತ್ರಗಳು)

ಮಧ್ಯಾಹ್ನ 1 ಗಂಟೆಗೆ ಪಿಲಿಕುಳದ ವತಿಯಿಂದ ಆಟಿಯ ನಾನಾ ಬಗೆಯ ಖಾದ್ಯಗಳೊಂದಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ವಿಶೇಷ ಭೋಜನದ ಕೂಪನುಗಳನ್ನು ಮಂಗಳೂರಿನ ಆಯ್ದ ಸ್ಥಳಗಳಲ್ಲಿ ಮುಂಚಿತವಾಗಿ ಇಡಲಾಗುವುದು. ಈ ಕುರಿತು ಪ್ರತ್ಯೇಕ ಪತ್ರಿಕಾ ಪ್ರಕಟಣೆ ಮತ್ತು ಪಿಲಿಕುಳದ ವೆಬ್‍ಸೈಟ್ www.pilikula.com ನಲ್ಲಿ ಪ್ರಕಟಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪ್ರಕಟಣೆ ತಿಳಿಸಿದೆ.

Comments are closed.