ಕರಾವಳಿ

ಪಂಪ್‌ವೆಲ್‌ – ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯ ವಿಳಂಬ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಆಗಸ್ಟ್.01: ನಗರದ ಪಂಪ್‌ವೆಲ್‌ – ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯ ವಿಳಂಬ ಖಂಡಿಸಿ ಮಂಗಳೂರು ನಗರ ಮತ್ತು ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ಪಂಪ್‌ವೆಲ್‌ ವೃತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ದೇಶದ ವಿವಿಧ ಕಡೆಗಳಲ್ಲಿ ಪ್ಲೈಓವರ್ ಕಾಮಗಾರಿಗಳು ಒಂದು-ಒಂದೂವರೆ ವರ್ಷದೊಳಗೆ ಮುಕ್ತಾಯವಾಗುತ್ತದೆ. ಆದರೆ ಪಂಪ್‌ವೆಲ್‌ನ ಈ ಕಾಮಗಾರಿಯನ್ನು ಆರಂಭಿಸಿ ಎಂಟು ವರ್ಷವಾದರೂ ಮುಕ್ತಾಯವಾಗಿಲ್ಲ. ಕೇಂದ್ರ ಸರಕಾರವನ್ನು ಪ್ರತಿನಿಧಿಸುತ್ತಿರುವ ಈ ಕ್ಷೇತ್ರದ ಸಂಸದರು ಇದಕ್ಕೆ ನೇರ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದರು.

ಪಂಪ್​ವೆಲ್ ಮೇಲ್ಸೇತುವೆ ಕಾಮಗಾರಿ ಆರಂಭಿಸಿ ಎಂಟು ವರ್ಷವಾದರೂ ಪೂರ್ಣಗೊಳ್ಳದೆ ಇರುವುದಕ್ಕೆ ಖಂಡನೆ ವ್ಯಲ್ತಪಡಿಸಿದ ಶಾಸಕರು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪ್ರತಿಕೃತಿಯನ್ನು ದಹಿಸಿದ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮಾಜಿ ಮೇಯರ್ ಮಹಾಬಲ ಮಾರ್ಲ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ,ಮಹಿಳಾ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಯೂತ್ ಘಟಕದ ಪ್ರಮುಖರಾದ ರಮಾನಂದ ಬೋಳಾರ್, ವಿಶ್ವಾಸ್ ದಾಸ್, ಟಿ.ಕೆ.ಸುಧೀರ್ , ಪದ್ಮನಾಭ ಅಮೀನ್ ಹಾಗೂ ಮತ್ತಿತರ ಪ್ರಮುಖರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Comments are closed.