ಕರಾವಳಿ

ಮಂಗಳೂರು ಮಹಾನಗರ ಪಾಲಿಕೆಯಿಂದ ಅಧಿಕಾರ ದುರ್ಬಳಕೆ ಆರೋಪ : ಬಿಜೆಪಿಯಿಂದ ಪ್ರತಿಭಟನೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ದುರ್ಬಳಕೆಯಾಗುತ್ತಿದೆ ಹಾಗೂ ಪುರಭವನಕ್ಕೆ ಪುನರ್ ನಾಮಕರಣ ಮಾಡಲು ಮೀನಾ ಮೇಷ ಮಾಡುತ್ತಿದೆ ಎಂದು ಆರೋಪಿಸಿ ಮಂಗಳೂರು ಮಹಾನಗರ ಪಾಲಿಕೆಯ ದುರಾಡಳಿತದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಘಟಕದ ವತಿಯಿಂದ ಬುಧವಾರ ಮಹಾನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮನಪಾ ಸದಸ್ಯ ಹಾಗೂ ಮನಪಾ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಆಡಳಿತದ ಪಾಲಿಕೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಜನತೆಯ ಯಾವ ಕೆಲಸವೂ ಕೂಡ ಪಾಲಿಕೆಯಲ್ಲಿ ಆಗುತ್ತಿಲ್ಲ. ಪ್ರತಿಯೊಂದು ಅರ್ಜಿಗೆ ಸಕಾಲದಲ್ಲಿ ಮುಕ್ತಿ ಸಿಗುತ್ತಿಲ್ಲ. ನಗರದ ಹೃದಯಭಾಗದಲ್ಲಿರುವ ಪುರಭವನದ ಹೆಸರನ್ನು ಬದಲಾಯಿಸಲೂ ಕೂಡ ಪಾಲಿಕೆಯ ಆಡಳಿತ ಮೀನಮೇಷ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಪಕ್ಷದ ಪ್ರಮುಖರಾದ ಭಾಸ್ಕರಚಂದ್ರ ಶೆಟ್ಟಿ, ಸಂಜಯ್ ಪ್ರಭು, ನಿತಿನ್ ಕುಮಾರ್, ಮಹಿಳಾ ಘಟಕದ ಪ್ರಮುಖರು ಸೇರಿದಂತೆ ನೂರಾರು ಮಂದಿ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Comments are closed.