
ಮಂಗಳೂರು, ಆಗಸ್ಟ್.16: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿರುವ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ತೊಡಕುಂಟಾದ ಘಟನೆ ಮಣ್ಣಗುಡ್ಡೆ ಸಮೀಪ ನಡೆದಿದೆ.

ನಗರದ ಲಾಲ್‌ಭಾಗ್ ನಿಂದ ಕೆನಾರ ಶಾಲೆಗೆ ಹೋಗುವ ( ಸ್ಕೇಟಿಂಗ್ ಗ್ರೌಂಡ್ ಬಳಿ) ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಗಾಳಿ- ಮಳೆಗೆ ಉರುಳಿ ಅ ರಸ್ತೆಯಲ್ಲಿ ಸಾಗುತ್ತಿದ್ದ ಆಟೊ ರಿಕ್ಷಾವೊಂದರ ಮೇಲೆ ಬಿದ್ದಿದೆ. ಪರಿಣಾಮ ಆಟೋ ಚಾಲಕ ಗಾಯಗೊಂಡಿದ್ದು, ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಘಟನೆಯಲ್ಲಿ ಆಟೊ ರಿಕ್ಷಾ ಜಖಂಗೊಂಡಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿತ್ತು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಯ ಸಾರ್ವಜನಿಕರ ಸಹಕರದಿಂದ ಮರವನ್ನು ತೆರವುಗೊಳಿಸಿದರು.
Comments are closed.