ಕರಾವಳಿ

ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಗಮನವಿರಲಿ: ಅಧಿಕಾರಿಗಳಿಗೆ ಸಚಿವೆ ಡಾ. ಜಯಮಾಲಾ ಸೂಚನೆ

Pinterest LinkedIn Tumblr

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವರಗಳನ್ನು ಪಡೆದುಕೊಂಡರು. ಅತಿವೃಷ್ಠಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ನಿರ್ದೇಶನ ನೀಡಿದರು.

ಕಂದಾಯ ಇಲಾಖೆಯ ಅಧಿಕಾರಿಗಳು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಭೂ ವಿಜ್ಞಾನ ಅಧಿಕಾರಿಗಳೊಂದಿಗೆ ಸಚಿವರು ಪ್ರತ್ಯೇಕ ಪ್ರತ್ಯೇಕವಾಗಿ ಚರ್ಚಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

Comments are closed.