ಕರಾವಳಿ

‘ಕೊಲೆಸ್ಟ್ರಾಲ್’ಮತ್ತು ಗಂಟಲಿನಲ್ಲಿನ ಅಂಟು ಕಫವನ್ನು ತೆಗೆದುಹಾಕುವ ಶಕ್ತಿ ಈ ಎಲೆಗಿದೆ.

Pinterest LinkedIn Tumblr

ಭಾರತೀಯ ಸಂಪ್ರದಾಯದಲ್ಲಿ ಅತಿ ಹೆಚ್ಚಿನ ವೀಳ್ಯೆದೆಲೆಗೆ ಮಹತ್ವವಿದೆ. ಕರಾವಳಿ ಕರ್ನಾಟಕದಲ್ಲಿ ತುಳುವರ ಎಲ್ಲಾ ಶುಭ ಕಾರ್ಯ ಗಳಿಗೂ ಎಲೆ ಅಡಿಕೆ ಬೇಕೇಬೇಕು. ನಿತ್ಯದ ದೇವರ ಸಮರ್ಪಣೆಗೂ ಹಣ್ಣು ಕಾಯಿಗಳ ಜತೆಗೆ ಎಲೆ ಅಡಿಕೆ ಇರಲೇ ಬೇಕು, `ಫಲತಾಂಬೂಲ’ ಕೊಡುವಾಗ ತೆಂಗಿನ ಕಾಯಿಯ ಜತೆಗೆ ವೀಳ್ಯದೆಲೆ ಮತ್ತು ಅಡಿಕೆ ಇಡಲೇ ಬೇಕು. ದೇವರ ಪೂಜೆಯ ಜೊತೆಗೆ ತಾಂಬೂಲಕ್ಕೂ ವೀಳ್ಯದೆಲೆಯನ್ನು ಬಳಸುತ್ತೇವೆ. ಅಡಿಕೆ ಸುಣ್ಣ ಹಾಕಿ ತಿನ್ನುವ ವೀಳ್ಯದೆಲೆಯಿಂದ ಅತಿ ಹೆಚ್ಚಿನ ಉಪಯೋಗಗಳು ದೊರೆಯುತ್ತವೆ.

ವೀಳ್ಯದೆಲೆ ತಿನ್ನುವುದರಿಂದ ಆಗುವ ಹಲವು ಪ್ರಯೋಜನಗಳು

ಒಂದು ವೀಳ್ಯದೆಲೆ, ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು.
ಕ್ಯಾಲ್ಸಿಯಂ ಅಂಶ ಹೆಚ್ಚಿರುವ ವೀಳ್ಯದೆಲೆ ತಿನ್ನುವುದರಿಂದ ಜೀರ್ಣಶಕ್ತಿ ಹೆಚ್ಚಿಸಿ, ಧ್ವನಿ ಸರಿಪಡಿಸಿ, ಗ್ಯಾಸ್ಟ್ರಿಕ್ ಟ್ರಬಲ್ ನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ.
ಮಕ್ಕಳಲ್ಲಿನ ಕೆಮ್ಮು ಮತ್ತು ಅಜೀರ್ಣಕ್ಕೆ ಈ ಎಲೆಯ ರಸ ಉಪಯೋಗ.
ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ, ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವೀಳ್ಯದೆಲೆಯನ್ನು ಎದೆಯ ಮೇಲಿಡುವುದು ಪ್ರಯೋಜನಕಾರಿ.
ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ಕೊಟ್ಟರೆ ನೋವು ಮಾಯವಾಗಿ ಮೂತ್ರ ಸುಲಭವಾಗಿ ಆಗುವುದು.
ಮಕ್ಕಳಲ್ಲಿ ನೆಗಡಿ, ಕೆಮ್ಮು, ಕಫ‌ ಉಂಟಾದಾಗ ವೀಳ್ಯದೆಲೆಯ ರಸ, ತುಳಸೀರಸ, ದೊಡ್ಡಪತ್ರೆಯ ರಸ ಬೆರೆಸಿ, ಜೇನು ತುಪ್ಪ ಸೇರಿಸಿ ನೀಡಿದರೆ ಶೀಘ್ರ ಗುಣವಾಗುತ್ತದೆ.
ಅಸ್ತಮಾ, ಕೆಮ್ಮು, ಕಫ‌ದಿಂದ ಬಳಲುವವರು, ವೀಳ್ಯದೆಲೆಯ ರಸ, ಬಿಳಿ ಈರುಳ್ಳಿಯ ರಸ ಹಾಗೂಜೇನುತುಪ್ಪ ಬೆರೆಸಿ, ಅದರಲ್ಲಿ ಶುದ್ಧ ಇಂಗನ್ನು ಕದಡಿ ದಿನಕ್ಕೆ 3-4 ಬಾರಿ ಸೇವಿಸಿದರೆ ತುಂಬಾ ಪರಿಣಾಮಕಾರಿ.

ಹೊಟ್ಟೇ ಉಬ್ಬರ, ಕೂದಲು ಉದುರುವುದು ನಿವಾರಣೆಯಾಗುತ್ತದೆ: 2 ಕಪ್‌ ಕೊಬ್ಬರಿ ಎಣ್ಣೆಗೆ ಅರ್ಧ ಕಪ್‌ ವೀಳ್ಯದೆಲೆಯ ರಸ ಮತ್ತು ಅರ್ಧ ಕಪ್‌ ಒಂದೆಲಗದ ರಸ ಬೆರೆಸಿ ಚೆನ್ನಾಗಿ ಕುದಿಸಿ ನಿತ್ಯ ತಲೆಯ ಕೂದಲಿಗೆ ಹಚ್ಚಿ ಮಾಲೀಶು ಮಾಡಬೇಕು. ಇದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ. .

ವೀಳ್ಯದ ಎಲೆಗಳನ್ನು ಕತ್ತರಿಸಿ ನೀರಿನಲ್ಲಿ ಹಾಕಿ ಕುದಿಸಿ, ಬಳಿಕ ಸೋಸಿ ಈ ಕಷಾಯಕ್ಕೆ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸಿದರೆ ವಸಡಿನ ನೋವು, ಊತ ಗುಣವಾಗುತ್ತದೆ.

ಹಲ್ಲುನೋವು, ವಸಡುನೋವು ಕಡಿಮೆಯಾಗುತ್ತದೆ: ತೀವ್ರವಾದ ಹಲ್ಲು ನೋವಿದ್ದಾಗ ವೀಳ್ಯದೆಲೆಯ ರಸದಲ್ಲಿ ಲವಂಗದ ಹುಡಿಯನ್ನು ಬೆರೆಸಿ, ಅದರಲ್ಲಿ ಅದ್ದಿದ ಹತ್ತಿಯನ್ನು ನೋವಿರುವ ಭಾಗದಲ್ಲಿ ಇರಿಸಬೇಕು.

ಗರ್ಭಿಣ ಸ್ತ್ರೀಯರಲ್ಲಿ ವಾಕರಿಕೆ, ಬಿಕ್ಕಳಿಕೆ ಉಂಟಾದಾಗ 2 ವೀಳ್ಯದೆಲೆಯಲ್ಲಿ ಅಡಿಕೆಯ ಚೂರನ್ನು ಇಟ್ಟು ಜೊತೆಗೆ 4 ಯಾಲಕ್ಕಿ ಕಾಳುಗಳನ್ನಿಟ್ಟು ಜಗಿದು ರಸ ಹೀರಿದರೆ ಶಮನಕಾರಿ.

ಗಾಯ ಉಂಟಾದಾಗ, ತುರಿಕೆ ಕಜ್ಜಿಗಳಿಗೆ ವೀಳ್ಯದೆಲೆಯ ರಸದಲ್ಲಿ 4-6 ಹನಿ ನಿಂಬೆರಸ ಬೆರೆಸಿ ಹಚ್ಚಿದರೆ ಗುಣಕಾರಿ.
ವೀಳ್ಯದೆಲೆಯನ್ನು ಕಾವಲಿಯ ಮೇಲೆ ಬೆಚ್ಚಗೆ ಮಾಡಿ, ಅದಕ್ಕೆ ಕರ್ಪೂರ ಬೆರೆಸಿದ ಕೊಬ್ಬರಿ ಎಣ್ಣೆಯನ್ನು ಲೇಪಿಸಿ, ಹಣೆಗೆ ಶಾಖ ನೀಡಿದರೆ ತಲೆನೋವು ಪರಿಹಾರವಾಗುತ್ತದೆ.

ವೀಳ್ಯದೆಲೆ ‘ಕೊಲೆಸ್ಟ್ರಾಲ್’ಮತ್ತು ಗಂಟಲಿನಲ್ಲಿನ ಅಂಟು ಕಫವನ್ನು ತೆಗೆದುಹಾಕುತ್ತದೆ. ಅನ್ನಜೀರ್ಣವಾಗಲು ಬೇಕಾಗುವ ನಾರುಮಯ ಹಾಗೂ ಗೆರೆಗಳಿರುವ ಪದಾರ್ಥವು ಈ ಎಲೆಯಿಂದ ಸಿಗುತ್ತದೆ. ಎಲೆಯಲ್ಲಿನ ಕ್ಷಾರತನವು ಜಂತುಗಳನ್ನು ನಾಶಪಡಿಸುತ್ತದೆ.

Comments are closed.