ಕುಂದಾಪುರ: ಗುರುವಾರ ಸಂಜೆ ನಡೆದ ವಿಶೇಷ ಬೆಳವಣಿಗೆಯೊಂದರಲ್ಲಿ ಶಾಂತಿನಿಕೇತನ ವಾರ್ಡಿನಿಂದ ಪುರಸಭಾ ಚುನಾವಣೆಗೆ ಆಕಾಂಕ್ಷಿಯಾಗಿದ್ದ ಬಿಜೆಪಿಯ ಮಹಿಳಾ ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿ ಗೌರಿ ಶಿವಾನಂದ ದೇವಾಡಿಗ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಗೌರಿ ದೇವಾಡಿಗರವರಿಗೆ ಪಕ್ಷದ ಬಾವುಟವನ್ನು ಬ್ಲಾಕ್ ಸಮಿತಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿಯವರು ಹಸ್ತಾಂತರಿಸುವುದರ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಲಾಯಿತು.

ಈ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರಾದ ಕೆದೂರು ಸದಾನಂದ ಶೆಟ್ಟಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗ ಉಪಾಧ್ಯಕ್ಷ ಮಾಣಿ ಗೋಪಾಲ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಮುಖಂಡರಾದ ದೇವಾನಂದ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಮೊಳಹಳ್ಳಿ ದಿನೇಶ ಹೆಗ್ಡೆ, ದೇವಕಿ ಸಣ್ಣಯ್ಯ, ಯುವ ಮುಖಂಡರಾದ ಇಚ್ಚಿತಾರ್ಥ ಶೆಟ್ಟಿ, ವಕ್ವಾಡಿ ರಮೇಶ ಶೆಟ್ಟಿ, ರಟ್ಟಾಡಿ ಸಂಪತ್ ಕುಮಾರ್ ಶೆಟ್ಟಿ, ಅಶೋಕ್ ಸುವರ್ಣ, ವೇಣು ಮುಂತಾದವರು ಉಪಸ್ಥಿತರಿದ್ದರು.
Comments are closed.