ಉಡುಪಿ: ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿನೋದ (23 ವರ್ಷ) ಎಂಬುವವರು ಆಗಸ್ಟ್ 24 ರಂದು, ಕುಂದಾಪುರದಿಂದ ಕಾಣೆಯಾಗಿದ್ದು, 5 ಅಡಿ 5 ಇಂಚು ಎತ್ತರವಿದ್ದು, ಎಣ್ಣೆಗಪ್ಪು ಮೈಬಣ್ಣ , ಕನ್ನಡ, ಹಿಂದಿ, ಇಂಗ್ಲೀಷ್, ಕೊಂಕಣಿ ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08254-237100 ಅಥವಾ ಪೊಲೀಸ್ ವೃತ್ತ ನಿರೀಕ್ಷಕರು, ಕುಂದಾಪುರ ದೂರವಾಣಿ ಸಂಖ್ಯೆ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಂ. 0820- 2526444 ಗೆ ಮಾಹಿತಿ ನೀಡುವಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
Comments are closed.