
ಮಂಗಳೂರು : ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ಹಾಸ್ಟೆಲ್ ಇದರ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.13ರಿಂದ 15ರವರೆಗೆ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಜರಗಲಿದೆ
ಎಂದು ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆಯೊಂದಿ ಗೆ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಮತ್ತು ತಾಲೂಕು ಬಂಟರ ಸಂಘ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಬಂಟರ ಮಾತೃ ಸಂಘ ಹಾಗೂ ದ.ಕ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಇತರ ಸಂಘ- ಸಂಸ್ಥೆಗಳ ಹಾಗೂ ಎಲ್ಲಾ ಜಾತಿ-ಮತ ಬಾಂಧವರ ಸಹಕಾರದೊಂದಿಗೆ ಶ್ರದ್ಧಾ ಭಕ್ತಿಯೊಂದಿಗೆ ಜರಗಲಿದೆ ಎಂದು ಹೇಳಿದರು.

ಸೆ.12ರಂದು ಬುಧವಾರ ಸಂಜೆ ೫ ಗಂಟೆಗೆ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಪ್ರಾರ್ಥನೆ ಮಾಡಿ ರಾಮದಾಸ ಆಚಾರ್ರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿ ವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರಕ್ಕೆ ಬರಮಾಡಿಕೊಳ್ಳಲಾಗುವುದು.
ಸೆ.13ರಂದು ಬೆಳಿಗ್ಗೆ ೮ಕ್ಕೆ ಸಾಮೂಹಿಕ ಪ್ರಾರ್ಥನೆ ಬಳಿಕ ಬ್ರಿಗೇಡಿಯರ್ ವಿನೋದ್ ಅಡಪ ಮತ್ತು ಸೋನಿಯಾ ವಿ. ಅಡಪರಿಂದ ಧ್ವಜಾರೋಹಣ ನಡೆಯಲಿದೆ. ಬಳಿಕ ಮೂರ್ತಿ ಪ್ರತಿಷ್ಠೆ, ಗಣಹೋಮ, ತೆನೆ ಹಬ್ಬ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ. ಮಧ್ಯಾಹ್ನ ಬಂಟ ಯುವಕ ಯುವತಿಯರಿಂದ ಸಮಕಾಲಿನ ನೃತ್ಯ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಧಾರ್ಮಿಕ ಸಭೆ ಜರಗಲಿದ್ದು, ಸನ್ಮಾನ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 8ಕ್ಕೆ ಯಕ್ಷಗಾನ ನಾಟ್ಯ ವೈಭವ ಪ್ರದರ್ಶನಗೊಳ್ಳಲಿದೆ.

ಸೆ.14ರಂದು ಬೆಳಗ್ಗೆ 10 ಗಂಟೆಗೆ ಭಜನಾ ನೃತ್ಯ ಸ್ಪರ್ಧೆ ನಡೆಯಲಿದೆ. ಸಂಜೆ 5ಕ್ಕೆ ಧಾರ್ಮಿಕ ಸಭೆ, ಸನ್ಮಾನ ಕಾರ್ಯಕ್ರಮ ಜರುಗಲಿದೆ. ರಾತ್ರಿ ಗಂಟೆ 8ಕ್ಕೆ ಪುತ್ತೂರು ನರಸಿಂಹ ನಾಯಕ್ ಮತ್ತು ರಾಯಚೂರು ಶೇಷಗಿರಿ ದಾಸ್ ಬಳಗದವರಿಂದ ಭಕ್ತಿಗಾನ ವೈಭವ ನಡೆಯಲಿದೆ.
ಸೆ.15ರಂದು ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣ ಯಾಗ, ಭಜನೆ, ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ 3:30ಕ್ಕೆ ಶೋಭಾಯಾತ್ರೆ ಜರುಗಲಿದೆ. ಕಾರ್ಯಕ್ರಮದ ಅಂಗವಾಗಿ ಸೆ.12ರಂದು ಸಂಜೆ 4ರಿಂದ ರಾಮಕೃಷ್ಣ ವಿದ್ಯಾಸಂಸ್ಥೆಯ ಆವರಣದಲ್ಲಿ ಸಾರ್ವಜನಿಕವಾಗಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಜರುಗಲಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದರು.
ಕೊಡಗಿನಲ್ಲಿ ಇತ್ತೀಚೆಗೆ ಪಾಕೃತಿಕ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಹಾಗೂ ಸಂತ್ರಸ್ತರಿಗೆ ನೆರವು ನೀಡುವ ದೃಷ್ಟಿಯಿಂದ ಈ ಬಾರಿಯ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ಈ ಸಂದರ್ಭದಲ್ಲಿ ತಿಳಿಸಿದರು.
ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಂಚಾಲಕಿ ಡಾ.ಆಶಾಜ್ಯೋತಿ ರೈ,ಬಂಬ್ರಾಣ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಹಾಸ ರೈ ಡಿ. ಶೆಟ್ಟಿ ರಂಗೋಲಿ,ಪ್ರಧಾನ ಕಾರ್ಯದರ್ಶಿ ಸುರೇಶ ರೈ ಮಕರಜ್ಯೋಶಿ, ಜೊತೆ ಕೋಶಾಧಿಕಾರಿಗಳು ಜಯಲಕ್ಷ್ಮೀ ಆರ್. ಶೆಟ್ಟಿ ಬಿಜೈ ಪ್ರಮುಖರಾದರವಿರಾಜ ಶೆಟ್ಟಿ ನಿಟ್ಟೆ ಗುತ್ತು, ಉಮೇಶ್ ರೈ, ವಸಂತ ಶೆಟ್ಟಿ, ಸುದೇಶ್ ಶೆಟ್ಟಿ ಕೊಡಿಯಾಲಬೈಲ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Comments are closed.