ಕರಾವಳಿ

ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ :ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗೌರವ ಸಲ್ಲಿಕೆ

Pinterest LinkedIn Tumblr

ಮಂಗಳೂರು : ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರಿನ ವಿದ್ಯಾರ್ಥಿಗಳು ಬುಧವಾರ ಶಿಕ್ಷಕರ ದಿನಾಚರಣೆಯನ್ನು ವಿಜೃಂಬಣೆಯಿಂದ ಆಚರಿಸುವುದರೊಂದಿಗೆ ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವನ್ನು ಸಲ್ಲಿಸಿದರು.

ಈ ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವುದರ ಮುಖೇನ ಉದ್ಘಾಟಿಸಲಾಯಿತು. ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರಿನ ಡೀನ್‌ರವರಾದ ಫ್ರೋ. ಹೆಚ್. ಶಿವಾನಂದ ಮೂರ್ತಿಯವರು ಈ ಕಾರ್ಯಕ್ರಮದ ಅಧ್ಯಕ್ಷರಾಗಿದ್ದರು. ಅವರು ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ದೇಶದಾದ್ಯಂತ ಆಚರಿಸಲ್ಪಡುವ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಅನಸ್ಥೇಶಿಯೋಲಜಿ ವಿಭಾಗದ ಮುಖ್ಯಸ್ಥರಾಗಿರುವ ಡಾ. ಪದ್ಮನಾಭ ಇವರು ಕಾರ್ಯಕ್ರಮದ ಮುಖ್ಯ ಅಥಿತಿಯಾಗಿದ್ದರು. ಇವರು ಜವಾಬ್ದಾರಿಯುತ ನಾಗರೀಕರನ್ನು ಹೊರತರುವ ನಿಟ್ಟಿನಲ್ಲಿ ಶಿಕ್ಷಣದ ಮಹತ್ವವನ್ನು ತಿಳಿಸಿದರು. ಅವರು ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಕೆಲವು ಸಲಹೆಗಳನ್ನು ಕೂಡಾ ನೀಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಗಳಾದ ಡಾ. ದಯಾನಂದ ನಾಯ್ಕ್ ಇವರು ಕಾರ್ಯಕ್ರಮದ ಗೌರವಾರ್ಥ ಅಥಿತಿಯಾಗಿದ್ದರು. ಇವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಡುವಿನ ಸಂಬಂದಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ಶಿಕ್ಷಕರಲ್ಲಿರುವ ಜ್ಞಾನವನ್ನು ಹೊರಹೊಮ್ಮಿಸಲು ಪ್ರಯತ್ನಿಸಬೇಕೆಂದು ಅವರು ತಿಳಿಸಿದರು.

ಸಂಪೂರ್ಣ ಕಾರ್ಯಕ್ರಮವನ್ನು ವಿದ್ಯಾರ್ಥಿ ವೃಂದವೇ ಆಯೋಜಿಸಿರುವುದು ಕಾರ್ಯಕ್ರಮದ ವಿಶೇಷತೆಯಾಗಿತ್ತು. ಮಹಾವಿದ್ಯಾಲಯದ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮೀನುಗಾರಿಕಾ ಮಹಾವಿದ್ಯಾಲಯದ ಸಿಬ್ಬಂದಿ ಸಲಹೆಗಾರರಾದ ಡಾ. ಸುರೇಶ್ ಟಿ. ಹಾಗೂ ಶ್ರೀ. ಮನೋಜ್ ಕುಮಾರ್ ಇವರು ಈ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಸಹಕರಿಸಿದರು.

Comments are closed.