ಹೌದು ಅಶ್ವಗಂಧ ಉತ್ತಮ್ಮ ಔಷದಿಯ ಗುಣವನ್ನು ಹೊಂದಿದೆ. ಇದರಲ್ಲಿ ಹಲವು ಬೇನೆಗಳಿಗೆ ಮದ್ದು ಕೊಡಲಾಗುತ್ತದೆ, ನಾವು ನಿಮಗೆ ಈ ಮೂರೂ ನೋವು ನಿವಾರಣೆಗೆ ಅಶ್ವಗಂಧ ಹೇಗೆ ಕೆಲಸ ಮಾಡುತ್ತದೆ ಹಾಗು ಇದರ ಬಳಕೆಯನ್ನು ಯಾವ ರೀತಿಯಲ್ಲಿ ಮಾಡಬೇಕು ಅನ್ನೋದನ್ನ ತಿಳಿಸಿ ಕೊಡುತ್ತೇವೆ.
ನೋವು ಮತ್ತು ಬಾವುಗಳಿಗೆ ಔಷಧಿ:
ಈ ಅಶ್ವಗಂಧವು ಎಲ್ಲಾ ರೀತಿಯ ಬಾವು ಮತ್ತು ನೋವುಗಳನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲದೆ ಕೀಲುಗಳಲ್ಲಿ ನೋವು ಮತ್ತು ಊತವಿದ್ದರೆ ಇದರ ಎಲೆಗಳಿಗೆ ಎಣ್ಣೆ ಸವರಿ ಬಿಸಿ ಮಾಡಿ ನೋವಿರುವ ಜಾಗದಲ್ಲಿ ಕಟ್ಟುವುದು. ಹೀಗೆ ಮಾಡಿದರೆ ಪರಿಹಾರ ಕಂಡುಕೊಳ್ಳಬಹುದು.
ಬೆನ್ನು ನೋವು ನಿವಾರಣೆಗೆ ಸೂಕ್ತ ಪರಿಹಾರವನ್ನು ಒದಗಿಸಿಕೊಡುತ್ತದೆ ಹೇಗೆ ಗೋತ್ತಾ .?
10 ಗ್ರಾಂ ಶುದ್ಧಿ ಮಾಡಿದ ಅಶ್ವಗಂಧದ ನಯವಾದ ಪುಡಿ ಮತ್ತು10 ಗ್ರಾಂ ಕೆಂಪು ಕಲ್ಲುಸಕ್ಕರೆ ಪುಡಿಯನ್ನು ಒಂದು ಬಟ್ಟಲು ಬಿಸಿ ಹಾಲಿನಲ್ಲಿ ಸೇರಿಸಿ ಬೆಳಿಗ್ಗೆ ಮತ್ತು ಸಾಯಂಕಾಲ ಸೇವಿಸುವುದು.
ಅಶ್ವಗಂಧದ ಎಲೆಗಳಿಗೆ ಎಳ್ಳೆಣ್ಣೆ ಸವರಿ ಸ್ವಲ್ಪ ಬಿಸಿ ಮಾಡಿ ನೋವಿರುವ ಜಾಗದಲ್ಲಿ ಕಟ್ಟುವುದು. ಪ್ರತಿ ದಿವಸ ಎರಡು, ಮೂರು ಸಾರಿ ಈ ರೀತಿ ಮಾಡೋದ್ರಿಂದ ಈ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಾಣಬಹುದು.
ಆಯುರ್ವೇದದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಈ ಅಶ್ವಗಂಧ ಮನೆ ಮದ್ದು ಬಳಕೆಗೆ ಸೂಕ್ತವಾಗಿ ಕೆಲಸ ಮಾಡುತ್ತದೆ, ಇದರ ಬಳಕೆಯನ್ನು ಮಾಡಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು…

Comments are closed.