
ಮಂಗಳೂರು : ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಗರದ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಸೆ.13ರಿಂದ 15ರವರೆಗೆ ಪೂಜಿಸಲ್ಪಟ್ಟ 15ನೇ ವರ್ಷದ ಶ್ರೀ ಗಣೇಶೋತ್ಸವ ಸಮಾರಂಭ ಶನಿವಾರ ಶ್ರೀ ಗಣೇಶನ ವಿಸರ್ಜನ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತ್ತು.

ಸೆಪ್ಟಂಬರ್.15 ರಂದು ಬೆಳಿಗ್ಗೆ 8.30 ರಿಂದ ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ ನಡೆದು ಬಳಿಕ 12. 30ಕ್ಕೆ ಅನ್ನ ಸಂತರ್ಪಣೆ ನಡೆಯಿತು., 1 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನಾಸೇವೆ ನಡೆಯಿತು. ಅಪರಾಹ್ನ 3.30ಕ್ಕೆ ವಿಸರ್ಜ ಪೂರ್ವ ಪೂಜೆ ನಡೆದು, ಬಳಿಕ ದೀಪ ಪ್ರಜ್ವಲನೆಯೊಂದಿಗೆ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು.
ಬಳಿಕ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಅವರ ನೇತ್ರತ್ವದಲ್ಲಿ ಭಜನಾ ತಂಡಗಳ ಸಂಕೀರ್ತನೆಯೊಂದಿಗೆ ಶೋಭಯಾತ್ರೆಯು ಓಂಕಾರನಗರದಿಂದ ಆರಂಭಗೊಂಡಿತು.

ಶೋಭಾಯಾತ್ರೆಯು ಓಂಕಾರ ನಗರದಿಂದ ಬಂಟ್ಸ್ ಹಾಸ್ಟೆಲ್ ವೃತ್ತ, ಪಿ ವಿ ಎಸ್, ಡೊಂಗರಕೇರಿ, ನ್ಯೂಚಿತ್ರ ಟಾಕೀಸ್, ರಥಬೀದಿ, ಶ್ರೀ ವೆಂಕಟರಮಣ ದೇವಸ್ಥಾನವಾಗಿ ಮೂಲಕ ಸಾಗಲಿದ್ದು, ಮಹಮ್ಮಾಯಿ ದೇವಸ್ಥಾನದ ಕುಡ್ತೇರಿ ಪುಷ್ಕರಣಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ವಿಸರ್ಜಿಸಲಾಯಿತು.
ಶೋಭಾಯಾತ್ರೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ 60ಕ್ಕೂ ಹೆಚ್ಚು ಭಜನಾ ತಂಡಗಳು ಪಾಲ್ಗೊಂಡಿದ್ದವು.

ಮೆರವಣಿಗೆಯಲ್ಲಿ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಹಾಸ ರೈ ಡಿ. ಶೆಟ್ಟಿ ರಂಗೋಲಿ,ಪ್ರಧಾನ ಕಾರ್ಯದರ್ಶಿ ಸುರೇಶ ರೈ ಮಕರಜ್ಯೋಶಿ, ಜೊತೆ ಕೋಶಾಧಿಕಾರಿಗಳು ಜಯಲಕ್ಷ್ಮೀ ಆರ್. ಶೆಟ್ಟಿ ಬಿಜೈ ಪ್ರಮುಖರಾದರವಿರಾಜ ಶೆಟ್ಟಿ ನಿಟ್ಟೆ ಗುತ್ತು, ಉಮೇಶ್ ರೈ, ವಸಂತ ಶೆಟ್ಟಿ, ಸುದೇಶ್ ಶೆಟ್ಟಿ ಕೊಡಿಯಾಲಬೈಲ್ ಮುಂತಾದವರು ಭಾಗವಹಿಸಿದ್ದರು.
ಕೊಡಗಿನಲ್ಲಿ ಪಾಕೃತಿಕ ದುರಂತ ಹಿನ್ನೆಲೆ : ಸರಳ ಆಚರಣೆ
ಕೊಡಗಿನಲ್ಲಿ ಇತ್ತೀಚೆಗೆ ಪಾಕೃತಿಕ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಹಾಗೂ ಸಂತ್ರಸ್ತರಿಗೆ ನೆರವು ನೀಡುವ ದೃಷ್ಟಿಯಿಂದ ಈ ಬಾರಿಯ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
Comments are closed.