ಕರಾವಳಿ

ಕಾರಿನೊಳಗೆ ತನ್ನ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಮಾಜಿ ಶಿಪ್ ಕ್ಯಾಪ್ಟನ್, ಹಾಲಿ ಬಿಲ್ಡರ್ ಆತ್ಮಹತ್ಯೆ

Pinterest LinkedIn Tumblr

ಉಡುಪಿ: ಖಾಸಗಿ ಶಿಪ್ ಮಾಜಿ ಉದ್ಯೋಗಿಯೊಬ್ಬರು ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಒಲಿವೆರಾ ಲೂಯಿಸ್ (68) ಆತ್ಮಹತ್ಯೆ ಮಾಡಿಕೊಂಡವರು. ಇವರು ಲಕ್ಷ್ಮೀಂದ್ರನಗರ ನಿವಾಸಿಯಾಗಿದ್ದಾರೆ.

ನಿನ್ನೆ ತಡ ರಾತ್ರಿ ಮಣಿಪಾಲದ ಸಂಬಂಧಿಕರ ಮನೆಯ ಸಮೀಪ ತಮ್ಮ ಫೋರ್ಡ್ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಗೆ ಡೆತ್ ನೋಟ್ ಬರೆದಿರುವ ಒಲಿವೆರಾ ಲೂಯಿಸ್, ನನ್ನ ಸಾವಿಗೆ ನಾನೇ ಕಾರಣ. ಮಕ್ಕಳನ್ನು‌ ಚೆನ್ನಾಗಿ ನೋಡು ಎಂದು ಬರೆದಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ‌ ತೀರ್ವ ಖಿನ್ನತೆಗೂ ಒಳಗಾಗಿದ್ದರು. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು

ಸ್ಥಳಕ್ಕೆ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರ್ಗಿ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಮಣಿಪಾಲ ಸಿಪಿಐ ಸುದರ್ಶನ್ ಹಾಗೂ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.