ಕರಾವಳಿ

ವಕ್ಫ್ ಸೊತ್ತುಗಳ ಸಂರಕ್ಷಣೆಗೆ ಸರ್ವ ಕ್ರಮ : ಸಚಿವ ಝಮೀರ್ ಅಹಮದ್ ಖಾನ್

Pinterest LinkedIn Tumblr

ಮಂಗಳೂರು ಅಕ್ಟೋಬರ್ 04: ವಕ್ಫ್ ಸ್ವತ್ತುಗಳ ಸಂರಕ್ಷಣೆಗೆ ಸರ್ವ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಶೀಘ್ರದಲ್ಲೇ ಹಣ ಬಿಡುಗಡೆಗೊಳಿಸಲಾಗುತ್ತದೆ. ಆದ್ಯತೆಯ ಮೇರೆಗೆ ನಗರ ಪ್ರದೇಶವನ್ನು ಆಯ್ಕೆ ಮಾಡಲಾಗುವುದು. ದಫನ್ ಭೂಮಿ ಸೇರಿದಂತೆ ಎಲ್ಲಾ ವಕ್ಫ್ ಸ್ವತ್ತುಗಳನ್ನು ಸಂರಕ್ಷಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವರಾದ ಝಮೀರ್ ಅಹಮದ್ ಖಾನ್ ಹೇಳಿದರು.

ಸುಳ್ಯ ಅನ್ಸಾರಿಯಾ ಅನಾಥಾಲಯ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬುಧವಾರ ನಡೆದ ವಕ್ಫ್ ಸಂಸ್ಥೆಗಳ ಮುತವಲ್ಲಿ ಸಮಾವೇಶ, ಮಾಹಿತಿ ಕಾರ್ಯಾಗಾರ ಹಾಗೂ ಸಚಿವರಿಗೆ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಎಲ್ಲಾ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ದು ಪಾರದರ್ಶಕವಾಗಿ ವಿತರಿಸುವುದು ಇಲಾಖೆಯ ಗುರಿ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಕಣಚೂರ್ ಮೋನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯ ಟಿ.ಎಂ. ಶಹೀದ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಉಸ್ಮಾನ್, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ, ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯ ಎಸ್. ಸಂಶುದ್ದೀನ್, ಅನ್ಸಾರಿಯಾ ಯತೀಂಖಾನ ಅನಾಥಾಲಯ ಅಧ್ಯಕ್ಷ ಅಬ್ದುಲ್ ಮಜೀದ್ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ವಕ್ಫ್ ಸದಸ್ಯ ಕೆ.ಎಂ. ಮುಸ್ತಫ ಸ್ವಾಗತಿಸಿ, ವ್ಯವಸ್ಥಾಪಕ ಓವೈಸ್ ವಂದಿಸಿದರು.

Comments are closed.