ಕರಾವಳಿ

ಕುದ್ರೋಳಿ ಶ್ರೀಕ್ಷೇತ್ರ : ಅ.10ರಂದು ಬೆಳಗ್ಗೆ 11.50ಕ್ಕೆ ನವದುರ್ಗೆಯರ ಹಾಗೂ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್.೦5: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ.10 ರಂದು ನವರಾತ್ರಿ ಮಹೋತ್ಸವ ಆರಂಭಗೊಳ್ಳಲಿದ್ದು, ಈ ಪ್ರಯುಕ್ತ ನಡೆಯಲಿರುವ ವೈಭವದ ಮಂಗಳೂರು ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅ.14ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ (ಅಡ್ವಕೇಟ್) ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.10ರಂದು ಕುದ್ರೋಳಿ ಕ್ಷೇತ್ರದಲ್ಲಿ ಕಂಗೊಳಿಸುವ ದರ್ಬಾರು ಮಂಟಪದಲ್ಲಿ ಗಣಪತಿ, ನವದುರ್ಗೆಯರು, ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವ ಆರಂಭವಾಗಲಿದೆ.ಬೆಳಗ್ಗೆ 11.50ಕ್ಕೆ ನವದುರ್ಗೆಯರ ಹಾಗೂ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದೆ. ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ನವರಾತ್ರಿ ಮಹೋತ್ಸವಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರದ ಅಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಅವರು ಮಾತನಾಡಿ, ದಸರಾ ಮಹೋತ್ಸವ ಅಂಗವಾಗಿ ಪ್ರತಿನಿತ್ಯ ದೇಶದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಗರದ ಪ್ರಮುಖ ರಾಜರಸ್ತೆಗಳಿಗೆ ವಿದ್ಯುದ್ದೀಪಾಲಂಕಾರ ನಡೆಯುತ್ತಿದೆ. ಇದು ಮಾತ್ರವಲ್ಲದೆ ಡಿವೈಡರ್‌ಗಳಿಗೆ ಬಣ್ಣ ಬಳಿಯುವ ಕೆಲಸವನ್ನು ಮನಪಾ ನಡೆಸುತ್ತಿದೆ.

ಅ.19ರಂದು ಶುಕ್ರವಾರ ಸಾಯಂಕಾಲ 4ರಿಂದ ಶಾರದಾಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದ್ದು, ಶನಿವಾರ ಬೆಳಗ್ಗೆ ವಿಸರ್ಜನೆ ನಡೆಯಲಿದೆ. ಮೆರವಣಿಗೆಯಲ್ಲಿ ಈ ಬಾರಿ 70ಕ್ಕೂ ಅಧಿಕ ಟ್ಯಾಬ್ಲೋಗಳು, 50ಕ್ಕೂ ಅಧಿಕ ಕಲಾತಂಡಗಳು ಭಾಗವಹಿಸಲಿವೆ ಎಂದವರು ತಿಳಿಸಿದರು.

Comments are closed.