ಕರಾವಳಿ

ಬಂಟ್ವಾಳ ಬಳಿ ಬೈಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಬೈಕ್ ಸವಾರರಿಬ್ಬರು ಬಲಿ

Pinterest LinkedIn Tumblr

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ವೊಂದು ಬೈಕ್‌ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಂಗಳೂರು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಕುಡುಪು ನಿವಾಸಿ ಚರಣ್ ದೇವಾಡಿಗ (18) ಮತ್ತು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮಹಮದ್ ನೌಶಾದ್ (18) ಮೃತ ದುರ್ದೈವಿಗಳು. .ಸಿ.ರೋಡಿನಿಂದ ಕಾರಿಂಜ ದೇವಸ್ಥಾನದ ಕಡೆ ತೆರಳುತ್ತಿದ್ದ ವೇಳೆ ಜಕ್ರಿಬೆಟ್ಟು ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರಿಬ್ಬರು ಬಸ್‌ನ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯ ನಿವಾಸಿಗಳು ಹರಸಾಹಸ ಪಟ್ಟು ಬಸ್‌ನಡಿ ಸಿಲುಕಿ ಕೊಂಡು, ಚಿಂತಾಜನಕ ಸ್ಥಿತಿಯಲ್ಲಿದ್ದ ಸವಾರರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂದ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.