ಕರಾವಳಿ

‘ತುಳು ಆಟೊದ ಪಂತೊ’ : ತೀರ್ಪುಗಾರರಿಗೆ ಸಮ್ಮಾನ

Pinterest LinkedIn Tumblr

ಮಂಗಳೂರು : ಮೂಡಬಿದಿರೆಯ ಯಕ್ಷದೇವ ಮಿತ್ರ ಕಲಾಮಂಡಳಿ ಇತ್ತೀಚೆಗೆ ಏರ್ಪಡಿಸಿದ್ದ ‘ತುಳು ಆಟೊದ ಪಂತೊ’ ತುಳು ಯಕ್ಷಗಾನ ಬಯಲಾಟ ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಭಾಗವತ ಮತ್ತು ಪ್ರಸಂಗಕರ್ತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಖ್ಯಾತ ಸ್ತ್ರೀವೇಷಧಾರಿ ಎಂ.ಕೆ.ರಮೇಶಾಚಾರ್ಯ ಹಾಗೂ ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಭಾಗವಹಿಸಿದ್ದರು.

ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಯಕ್ಷದೇವ ಮಿತ್ರ ಕಲಾಮಂಡಳಿಯ ಅಧ್ಯಕ್ಷ ದೇವಾನಂದ ಭಟ್ ಬೆಳುವಾಯಿ ಸ್ವಾಗತಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ,ಉದ್ಯಮಿ ಶ್ರೀಪತಿ ಭಟ್, ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿ, ಜ್ಯೋತಿಷಿ- ಪ್ರಸಂಗಕರ್ತ ಅನಂತರಾಮ ಬಂಗಾಡಿ, ಜಾನಪದ ವಿದ್ವಾಂಸ ಡಾ.ಗಣೇಶ ಅಮೀನ್ ಸಂಕಮಾರ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Comments are closed.