ಕರಾವಳಿ

ಲೋಕಸಭೆ ಉಪ-ಚುನಾವಣೆ: ಕುಂದಾಪುರ, ಬೈಂದೂರಿನಲ್ಲಿ ಎರಡು ದಿನ ಮದ್ಯ ಸಿಗಲ್ಲ!

Pinterest LinkedIn Tumblr

ಉಡುಪಿ: ಶಿವಮೊಗ್ಗ ಲೋಕಸಭಾ ಉಪ-ಚುನಾವಣೆ 2018 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 3 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಮತದಾನ ಶಾಂತಿಯುತವಾಗಿ ಕಾನೂನು ಮತ್ತು ಸುವ್ಯವಸ್ಥೆಗಳನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯವು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ , ಮತದಾನ ಪ್ರಾರಂಭವಾಗುವ ದಿನದ 48 ಗಂಟೆಗಳ ಮುಂಚಿತವಾಗಿ ಅಂದರೆ, ನವೆಂಬರ್ 1 ರ ಸಂಜೆ 5 ಗಂಟೆಯಿಂದ, ನವೆಂಬರ್ 3 ರಂದು ಮಧ್ಯರಾತ್ರಿ 12 ಗಂಟೆಯ ವರೆಗೆ ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯ ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕುಂದಾಪುರ ಹಾಗು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಯಾವುದೇ ಹೋಟೆಲ್ಗಳಲ್ಲಿ, ಕ್ಲಬ್ಗಳಲ್ಲಿ, ಮದ್ಯ ಮಾರಾಟ/ ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.

Comments are closed.