ಕರಾವಳಿ

ಲೋಕಸಭಾ ಉಪ ಚುನಾವಣೆ ಹಿನ್ನೆಲೆ ಸರ್ಕಾರಿ ನೌಕರರಿಗೆ ರಜೆ

Pinterest LinkedIn Tumblr

ಉಡುಪಿ: ಭಾರತೀಯ ಚುನಾವಣಾ ಆಯೋಗವು ನವೆಂಬರ್ 3 ರಂದು ಶಿವಮೊಗ್ಗ ಲೋಕಸಭಾ ಉಪ ಚುನಾವಣೆ 2018- ರ ಸಾರ್ವತ್ರಿಕ ಉಪ ಚುನಾವಣೆ ನಿಗಧಿಪಡಿಸಿದ್ದು, ಲೋಕಸಭಾ ವ್ಯಾಪ್ತಿಯಲ್ಲಿ ಅರ್ಹ ಮತದಾರರಾಗಿರುವ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳ, ಶಾಲಾ ಕಾಲೇಜುಗಳ ( ಅನುದಾನಿತ ಶಿಕ್ಷಣ ಸಂಸ್ಥೆ ಒಳಗೊಂಡಂತೆ) ಸರ್ಕಾರಿ ನೌಕರರಿಗೆ ನವೆಂಬರ್ 3 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.

ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯ ಹೊರಗೆ ಕೆಲಸ ನಿರ್ವಹಿಸುತ್ತಿರುವ ಆದರೆ ಈ ಕ್ಷೇತ್ರಗಳಲ್ಲಿ ಅರ್ಹ ಮತದಾರರಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಛೇರಿಗಳ ನೌಕರರಿಗೂ ಈ ಆದೇಶ ಅನ್ವಯವಾಗುತ್ತದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Comments are closed.