
ಮಂಗಳೂರು ಅಕ್ಟೋಬರ್ 31 : ದುಬೈನಲ್ಲಿ ಜರುಗಿದ ಏಷ್ಯಾನ್ ಪವರ್ ಲಿಪ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದು ಬೆಸ್ಟ್ ಲಿಫ್ಟರ್ ಪ್ರಶಸ್ತಿ ಪಡೆದ ಅಂತರ್ ರಾಷ್ಟ್ರೀಯ ಕ್ರೀಡಾಪಟು ಹೇಮಚಂದ್ರ, (ಪತ್ರಾಂಕಿತ ವ್ಯವಸ್ಥಾಪಕರು, ಸಮಾಜ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು) ಇವರನ್ನು ವಿಕಾಸ್ ಕುಮಾರ್ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.
ಈ ವೇಳೆ ಮಾತಾನಾಡಿದ ಆಯುಕ್ತರು, ಏಷ್ಯಾನ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ಹೇಮಚಂದ್ರ ಅವರು ತಮ್ಮ ರಾಜ್ಯ ರಾಷ್ಟ್ರ ಮತ್ತು ಇಲಾಖೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಸೌಂದರ್ಯರಾಜ್, ಪದ್ಮಾ, ಉರ್ಮಿಳ ಉಪ ನಿರ್ದೇಶಕರಾದ ಸಬೀರ್ ಅಹಮ್ಮದ್ ಮುಲ್ಲಾ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು.
Comments are closed.