
ಮಂಗಳೂರು, ನವೆಂಬರ್.04: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಯಲ್ಲಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರನ್ನು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ತಂಡ ಕಾರ್ಯಾಚರಣೆ ನಡೆಸಿ ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ಖಲೀಲ್ ಕಾಲಿದ್ ಕುಂಜತ್ತೂರು (23) ಹಾಗೂ ಅಬ್ದುಲ್ ನಾಸೀರ್ ಇಬ್ರಾಹೀಂ (22) ಎಂದು ಗುರುತಿಸಲಾಗಿದೆ.
ಆರೋಪಿಗಳು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಮೋರ್ ಸೂಪರ್ ಮಾರ್ಕೆಟ್ ಬಳಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ ಸಂದರ್ಭ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಆರೋಪಿಗಳು ಗಾಂಜಾ ಸೇವನೆ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಉರ್ವ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಗಿದೆ.
ಕಾರ್ಯಾಚರಣೆಯಲ್ಲಿ ಕೇಂದ್ರ ಉಪವಿಭಾಗದ ರೌಡಿ ಅಧಿಕಾರಿ ಹಾಗೂ ಸಿಬ್ಬಂದಿಯವರು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.
Comments are closed.