ಸಾಂದರ್ಭಿಕ ಚಿತ್ರ
ಮಂಗಳೂರು : ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಸ್ಫೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡುವುದು ಮತ್ತು ಅಧಿಕೃತವಾಗಿ ಪರವಾನಗಿ ಪಡೆದವರು ಸ್ಫೋಟಕ ಪಟಾಕಿಗಳನ್ನು ಈ ಆದೇಶಾನುಸಾರ ಮಾತ್ರ ಮಾರಾಟ ಮಾಡುವುದು.
ದೀಪಾವಳಿ ಹಬ್ಬದ ಸಂಬಂಧ, ನರಕಚತುರ್ದಶಿ-6ನೇ ತಾರೀಖು, ದೀಪಾವಳಿ ಅಮಾವಾಸ್ಯೆ-7ನೇ ತಾರೀಖು, ಬಲಿಪಾಡ್ಯಮಿ-8ನೇ ತಾರೀಖು, ನವೆಂಬರ್ 2018ರ ಹಬ್ಬದ ಸಮಯದಲ್ಲಿ ಪಟಾಕಿಗಳನ್ನು ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಸಿಡಿಸುವುದು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು 14 ದಿನಗಳ ಕಾಲ ಅಂದರೆ, ದೀಪಾವಳಿ ಹಬ್ಬ ಆರಂಭವಾಗುವ 7 ದಿನಗಳ ಮೊದಲು ಮತ್ತು ದೀಪಾವಳಿ ಹಬ್ಬದ ನಂತರ 7 ದಿನಗಳು ಪಟಾಕಿ ಸಿಡಿಸುವುದರ ಬಗ್ಗೆ ಮೇಲ್ವಿಚಾರಣೆ ಮಾಡುವುದು.
ಎಲ್ಲಾ ಮಹಾನಗರ ಪಾಲಿಕೆಗಳು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಪಟಾಕಿಗಳನ್ನು ಸಾಮೂಹಿಕವಾಗಿ ಸಿಡಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸುವುದು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಸವೋಚ್ಛ ನ್ಯಾಯಾಲಯದ ದಿನಾಂಕ 23/31-10-2018ರ ಆದೇಶವನ್ನು ಪಾಲಿಸುವುದಕ್ಕೆ ಸೂಕ್ತ ಸಹಕಾರ ನೀಡುವುದು.
ಎಲ್ಲಾ ಇಲಾಖೆಗಳು ಪ್ರಮುಖವಾಗಿ ಪೊಲೀಸ್ ಇಲಾಖೆಯು ಪಟಾಕಿ ಸಿಡಿತ ಪ್ರಕ್ರಿಯೆಯು ನಿಗದಿತ ಅವಧಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು. ಸ್ಫೋಟಕ ಪಟಾಕಿಗಳ ಮಾರಾಟವನ್ನು ತಡೆಗಟ್ಟಲು ಕ್ರಮಕೈಗೊಳ್ಳುವುದು. ತಪ್ಪಿದಲ್ಲಿ ಸಂಬಂಧಿಸಿದ ಠಾಣಾಧಿಕಾರಿಗಳನ್ನು ನ್ಯಾಯಾಲಯದ ಉಲ್ಲಂಘನೆಗಾಗಿ ತಪ್ಪಿತಸ್ಥರೆಂದು ನಿರ್ಧರಿಸಿ, ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ, (ಕಾನೂನು ಮತ್ತು ಸುವ್ಯವಸ್ಥೆ) ಇವರ ಪ್ರಕಟಣೆ ತಿಳಿಸಿದೆ.
Comments are closed.