ಕರಾವಳಿ

ಉಡುಪಿಯಲ್ಲಿ ಟಿಪ್ಪು ಜಯಂತಿಗೆ ಅಡ್ಡಿಪಡಿಸಲು ಮುಂದಾದ ಹಿಂದೂಸಂಘಟನೆಯವರ ಬಂಧನ

Pinterest LinkedIn Tumblr

ಉಡುಪಿ: ಟಿಪ್ಪು ಜಯಂತಿ ವಿರೋಧಿಸಿ ಹಿಂದೂಪರ ಸಂಘಟನೆಗಳು ಜಿಲ್ಲಾಡಳಿತ ನಡೆಸಲು ಉದ್ದೇಸಿಸಿದ ಜಯಂತಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಿ ಅಡ್ಡಿಪಡಿಸಲು ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ ಘಟನೆ ಶನಿವಾರ ನಡೆದಿದೆ.

ಕರಾವಳಿಯಾದ್ಯಂತ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಟಿಪ್ಪು ಜಯಂತಿಗೆ ತೀವ್ರ ವಿರೋದ ವ್ಯಕ್ತ ಪಡಿಸಿವೆ. ಆದ್ರೆ ಸರಕಾರ ಹಾಗೂ ಜಿಲ್ಲಾಡಳಿತ ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಣೆಗೆ ಮುಂದಾದ ಹಿನ್ನಲೆಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೋಲಿಸರು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಯತ್ನವನ್ನು ವಿಫಲಗೊಳಿಸಿ ೨೦ ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ಬಳಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Comments are closed.