ಕರಾವಳಿ

“ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ”ದ ಪ್ರಯುಕ್ತ ಕ್ಯಾನ್ಸರ್ ರೋಗ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು : “ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ”ದ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧಿಕ್ಷಕರು/ ಜಿಲ್ಲಾ ಶಸ್ತ್ರಚಿಕಿತ್ಸಕರು ಡಾ. ರಾಜೇಶ್ವರಿ ದೇವಿ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕೋಶ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ-ದಕ್ಷಿಣ ಕನ್ನಡ ಇದರ ಕಾರ್ಯಕ್ರಮ ಅನುಷ್ಠನಾಧಿಕಾರಿಯಾದ ಡಾ. ಪ್ರವೀಣ್ ಸಿ.ಎಚ್. ಇವರ ನೇತೃತ್ವದಲ್ಲಿ “ಕ್ಯಾನ್ಸರ್ ಸ್ಕ್ರೀನಿಂಗ್ ಮತ್ತು ಜಾಗೃತಿ ಕಾರ್ಯಕ್ರಮ”ವು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಲಕ್ಷಣಗಳು ಮುಖ್ಯವಾಗಿ ಸ್ತನ, ಗರ್ಭಕೋಶ, ಶ್ವಾಸಕೋಶ ಹಾಗೂ ಬಾಯಿ ಕ್ಯಾನ್ಸರ್ ಕುರಿತು ಮಾಹಿತಿಯನ್ನು ನೀಡಿ, ಜಾಗೃತಿ ಗೀತೆಯನ್ನು ಹಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಲಾಯಿತು. \

ನವಂಬರ್ ತಿಂಗಳಲ್ಲಿ ತಜ್ಞ ವೈದ್ಯರಿಂದ ಕ್ಯಾನ್ಸರ್ ತಪಾಸಣೆಯನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಸಂಬಂಧಪಟ್ಟ ಹೋರರೋಗಿಗಳ ವಿಭಾಗದಲ್ಲಿ ನಡೆಸಲಾಗುವುದು ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ಸೂಚಿಸಲಾಯಿತು.

ಕಾರ್ಯಕ್ರಮದ ಯಶಸ್ವಿಗಾಗಿ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕೋಶದ ಸಿಬ್ಬಂದಿಗಳಾದ ಡಾ. ಸುಷ್ಮಾ, ಡಾ. ಚೇತನ್, ಅನುರಾಗ್, ಯಾಸ್ಮಿನ್, ಪದ್ಮಿನಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳಾದ ಶ್ರುತಿ, ವಿದ್ಯಾ ಸಹಕರಿಸಿದರು.

 

Comments are closed.