
ಮಂಗಳೂರು, ನವೆಂಬರ್.13: ನಗರದ ಕೆಪಿಟಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ನಂತೂರಿನಿಂದ ಕುಂಟಿಕಾನ್ ಕಡೆಗೆ (ರಾಷ್ಟ್ರೀಯ ಹೆದ್ದಾರಿಯಲ್ಲಿ) ಚಲಿಸುತ್ತಿದ್ದ ಬೈಕ್ ಸವಾರರು ಕೆಪಿಟಿ ಬಳಿ ತಮ್ಮ ವಾಹನದ ನಿಯಂತ್ರಣ ತಪ್ಪಿ ಕಾರ್‌ವೊಂದಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರರ ಮೇಲೆ ಖಾಸಗಿ ಬಸ್‌ವೊಂದು ಚಲಿಸಿದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕ್‌ನಲ್ಲಿದ್ದ ಹಿಂಬದಿ ಸವಾರಿ ಮಾಡುತ್ತಿದ್ದ ವ್ಯಕ್ತಿಗೂ ಗಾಯಗಳಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ನಗರ ಸಂಚಾರ ಪೂರ್ವ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Comments are closed.