ಕರಾವಳಿ

ಉಡುಪಿ ಜಿಲ್ಲೆಯಲ್ಲಿ 7 ಕೋಟಿ ವೆಚ್ಚದಲ್ಲಿ ರಂಗಾಯಣ ಕೇಂದ್ರ- ಡಾ. ಜಯಮಾಲಾ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ 7 ಕೋಟಿ ವೆಚ್ಚದಲ್ಲಿ ರಂಗಾಯಣ ಮತ್ತು ರಂಗ ಮಂದಿರ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ  ಹೇಳಿದ್ದಾರೆ. ಅವರು ಬುಧವಾರ ಉಡುಪಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಿವಿಧ ಅಭಿವೃಧ್ದಿ ಕಾಮಗಾರಿಗಳನ್ನು ಉದ್ಘಾಟಿಸಿ  ಮಾತನಾಡಿದರು.

ಜಿಲ್ಲೆಯಲ್ಲಿ ರಂಗಾಯಣ ಹಾಗೂ ರಂಗ ಮಂದಿರ ನಿರ್ಮಿಸಲು ಆದಿ ಉಡುಪಿಯಲ್ಲಿ 1.37 ಸೆಂಟ್ಸ್ ಜಾಗವನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದ್ದು, ಮುಂದಿನ ಡಿಸೆಂಬರ್‍ನಲ್ಲಿ ರಂಗಾಯಣ ಮತ್ತು ರಂಗ ಮಂದಿರಗಳು ಉದ್ಘಾಟನೆಯಗಲಿವೆ ಎಂದು ಸಚಿವರು ಹೇಳಿದರು.

ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಪ್ರಯೋಜನ ಪ್ರತಿ ನಾಗರೀಕರಿಗೂ ದೊರೆಯಬೇಕು, ಜಿಲ್ಲೆಯ ದ್ರವ ಮತ್ತು ಘನ ತ್ಯಾಜ್ಯ ವಿಲೇವಾರಿ ಮಾದರಿ ಇಡೀ ರಾಜ್ಯಕ್ಕೆ ಮಾದರಿಯಗಿದ್ದು, ಬೆಂಗಳೂರಿನಂತಹ ನಗರದಲ್ಲಿ ಇದನ್ನು ಅಳವಡಿಸಿಕೊಂಡರೆ ಕಸದ ಸಮಸ್ಯೆ ಬಗೆಹರಿಯಲಿದೆ, ಜಿಲ್ಲೆಯಲ್ಲಿ ತ್ಯಾಜ್ಯ ವಿಲೇವಾರಿ ಕುರಿತು ಜಿಲ್ಲಾಧಿಕಾರಿಗಳು ತೆಗದುಕೊಂಡಿರುವ ಕ್ರಮಗಳನ್ನು ಸಚಿವರು ಅಭಿನಂದಿಸಿದರು.

ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ 1.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಆಯುಷ್ ಆಸ್ಪತ್ರೆ, 4 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹ ಭಾಗಿತ್ವದಲ್ಲಿ ಪ್ರಾರಂಭಿಸಿರುವ ಸಿಟಿ ಸ್ಕ್ಯಾನಿಂಗ್ ಸೆಂಟರ್ ಉದ್ಘಾಟಿಸಿದ ಅಚಿವರು, ಎಸ್.ಎಲ್.ಆರ್.ಎಂ ಘಟಕದ ಉದ್ಘಾಟನೆ ಹಾಗೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕಣ್ಣಿನ ಆಪರೇಷನ್ ಘಟಕದ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.

ಇತ್ತೀಚೆಗೆ ಮಲ್ಪೆಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಪೋಷಕರಿಗೆ ಸಚಿವರು 5 ಲಕ್ಷ ರೂ ಗಳ ಪರಿಹಾರದ ಚೆಕ್ ವಿತರಿಸಿದರು.

ಕಾಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ತೋನ್ಸೆ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಜಿಲ್ಲಾ ಸರ್ಜನ್ ಡಾ. ಮಧುಸೂದನ್, ಜಿಲ್ಲಾ ಆಯುಷ್ ಅಧಿಕಾರಿ ಅಲಕಾನಂದ ರಾವ್ ಮತ್ತಿತರರು ಉಪಸ್ಥಿತರಿದ್ದರು.

Comments are closed.