ಕರಾವಳಿ

ಮಂಗಳೂರು : ಪೊಲೀಸು ಕಾನ್ಸ್‍ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ ಮುಂದೂಡಿಕೆ

Pinterest LinkedIn Tumblr

ಮಂಗಳೂರು ನವೆಂಬರ್ 24 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸು ಘಟಕಕ್ಕೆ ಸಂಬಂಧಿಸಿದ ನಾಗರಿಕ ಪೊಲೀಸು ಕಾನ್ಸ್‍ಟೇಬಲ್ (ಪುರುಷ & ಮಹಿಳಾ) ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಧಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳಿಗೆ ನವೆಂಬರ್ 25 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು.

ಕಾರಣಾಂತರಗಳಿಂದ ನವೆಂಬರ್ 25 ರಂದು ನಿಗದಿಪಡಿಸಲಾದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ನೇಮಕಾತಿ ರವರ ಪರವಾಗಿ ಪ್ರಕಟಣೆ ತಿಳಿಸಿದೆ.

ಡಿಸೆಂಬರ್ 13  : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

ಮಂಗಳೂರು ನವೆಂಬರ್ 24 :ಡಿಸೆಂಬರ್ 13 ರಂದು ಪೂರ್ವಾಹ್ನ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಅಧ್ಯಕ್ಷರು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕೇರಳ-ಗೋವಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರು ನವೆಂಬರ್ 24 : ಗಡಿಯಾಚೆಯೂ ಸಾಧನೆ ಮಾಡಿದ ಪ್ರತಿಭಾನ್ವಿತ ಕನ್ನಡ ವಿದ್ಯಾರ್ಥಿಗಳಿಗೆ 2018-19 ಸಾಲಿನಲ್ಲಿ ಡಿಸೆಂಬರ್ 2 ರಂದು ಪೂರ್ವಾಹ್ನ 11 ಗಂಟೆಗೆ ಎಡನೀರು ಮಠದಸಭಾಂಗಣ, ಎಡನೀರು, ಗಾಸರಗೋಡು ಇಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಎಡನೀರು ಮಠದ ಕೇಶವಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರಾದಡಾ. ಜಯಮಾಲ ಅವರು ಉದ್ಘಾಟಿಸಲಿದ್ದಾರೆ. ಪ್ರಾಸ್ತಾವಿಕ ನುಡಿ ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರೋ. ಎಸ್.ಜಿ. ಸಿದ್ಧರಾಮಯ್ಯ ಅವರು ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Comments are closed.