ಕರಾವಳಿ

ಕದ್ರಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಒಂದು ಕೋಟಿ ಹದಿನಾರು ಲಕ್ಷ ರೂಪಾಯಿ : ಶಾಸಕ ವೇದವ್ಯಾಸ ಕಾಮತ್

Pinterest LinkedIn Tumblr

ಮಂಗಳೂರು : ಮಂಗಳೂರಿನ ಕದ್ರಿ ಪಾರ್ಕ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಮಾರು ಒಂದು ಕೋಟಿ ಹದಿನಾರು ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು.

ಕದ್ರಿ ಪಾರ್ಕಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಶಾಸಕರು, ವಾಕಿಂಗ್ ಟ್ಯಾಕ್ ಗೆ ಈಗಾಗಲೇ ಇಂಟರ್ ಲಾಕ್ ಅಳವಡಿಸಲಾಗಿದ್ದು, ಇದು ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಅದರೊಂದಿಗೆ ಮಡ್ ವಾಯಿಂಗ್ ಟ್ರಾಕ್ ಕಾಮಗಾರಿಗೆ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತದೆ.

ಗಂಗಾನಪಾಳ್ಯ ಹಳದ ಕಾಮಗಾರಿಯನ್ನು ಸುಮಾರು ಹನ್ನೊಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಆರಂಭಿಸಲಾಗಿದ್ದು, ಓಪನ್ ಜಿಮ್ ಗೆ ಇಂಟರಲಾಕ್ ಹಾಕಲಾಗುತ್ತಿದೆ. ಇದು 18 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.

ಇನ್ನಿತರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಅನುದಾನ ಕೊರತೆ ಇಲ್ಲದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಶಾಸಕರೊಂದಿಗೆ ಸ್ಥಳೀಯ ಕಾರ್ಪೋರೇಟರ್ ರೂಪಾ ಡಿ ಬಂಗೇರ, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ಗುರುಚಂದ್ರ ಹೆಗ್ಡೆ ಗಂಗಾರಿ, ಸ್ಥಳೀಯರಾದ ರಾಮಕೃಷ್ಣ ರಾವ್, ಶ್ರೀನಿವಾಸ್ ಶೆಟ್ಟಿ, ರಾಜೇಶ್, ಪ್ರಜ್ವಲ್, ಇಂಜಿನಿಯರ್ ಗಳು, ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು

Comments are closed.