ಕರಾವಳಿ

ಪೂಜಾರಿ ಎನ್‌ಕೌಂಟರ್‌ಗೆ ಕರೆ : ದುಷ್ಕರ್ಮಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಲೋಬೋ ಆಗ್ರಹ

Pinterest LinkedIn Tumblr

ಮಂಗಳೂರು: : ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ವಿರುದ್ಧ ಅಪರಿಚಿತ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿ ಬೆದರಿಕೆ ಹಾಕಿರುವ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆಗ್ರಹಿಸಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತ ದುಷ್ಕರ್ಮಿಯೋರ್ವ ಕೀಳುಮಟ್ಟದ ಹೇಳಿಕೆ ನೀಡಿ ಎನ್‌ಕೌಂಟರ್ ಮಾಡಲು ಕರೆ ನೀಡಿರುವುದರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿ ಧರ್ಮ, ಜಾತಿಗಳ ನಡುವೆ ಕಂದಕ ಸೃಷ್ಟಿ ಮಾಡುವಲ್ಲಿ ಯತ್ನಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿದ್ದು, ಇದು ಕಾನೂನು ಬಾಹಿರವಾಗಿದೆ. ಹೇಳಿಕೆಯಲ್ಲಿ ಜನಾರ್ದನ ಪೂಜಾರಿ ಅವರನ್ನು ದೇಶದ್ರೋಹಿ ಹಾಗೂ ಎನ್‌ಕೌಂಟರ್ ಮಾಡಬೇಕು ಎಂದು ಕರೆ ನೀಡಿದ್ದಾನೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ತ್ವರಿತ ಹಾಗೂ ಪರಿಣಾಮಕಾರಿ ತನಿಖೆ ಮಾಡಬೇಕು. ಇಂತಹ ಹೇಳಿಕೆ ನೀಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಮನವಿ ಸ್ವೀಕರಿಸಿ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿರುವ ಮನವಿ ಆಧರಿಸಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Comments are closed.