ಕರಾವಳಿ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ; ಇಬ್ಬರು ಗಾಂಜಾ ವ್ಯಸನಿಗಳ ಬಂಧನ

Pinterest LinkedIn Tumblr

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಣ್ಣೀರು ಬಾವಿಯ ದಾವೂದ್ ಯಾನೆ ಸಿದ್ದೀಕ್ ( 33) ಹಾಗೂ ಕಸಬ ಬೇಂಗ್ರೆಯ ಅಬ್ದುಲ್ ಕಬೀರ್ (31) ಎಂದು ಹೆಸರಿಸಲಾಗಿದೆ.

ಪಣಂಬೂರು ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆ ಫುಟ್ ಬಾಲ್ ಗ್ರೌಂಡ್ ಬಳಿ ಗಾಂಜಾ ಅಮಲು ಪದಾರ್ಥವನ್ನು ಸೇವಿಸುತ್ತಿದ್ದ ಈ ಇಬ್ಬರು ಆರೋಪಿಗಳನ್ನು ಪೊಲೀಸ್ ಉಪನಿರೀಕ್ಷಕರಾದ ಉಮೇಶ್ ಕುಮಾರ್ ಎಮ್.ಎನ್ ಪಣಂಬೂರು ಠಾಣೆ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ ಪಣಂಬೂರು ಠಾಣೆಯಲ್ಲಿ ಅಕ್ರ 187/2018 ಕಲಂ:27(ಬಿ) ಎನ್.ಡಿ.ಪಿ.ಎಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ಮಂಗಳೂರು ನಗರದ ಪೊಲೀಸು ಆಯುಕ್ತರಾದ ಟಿ. ಆರ್ ಸುರೇಶ್ ಇವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಉಪ-ಆಯುಕ್ತರು (ಕಾ & ಸು) ಹನುಮಂತರಾಯ, ಪೊಲೀಸ್ ಉಪ-ಆಯುಕ್ತರು(ಅಪರಾಧ & ಸಂಚಾರ) ಶ್ರೀಮತಿ ಉಮಾ ಪ್ರಶಾಂತ್ ಇವರ ಮಾರ್ಗದರ್ಶನದಂತೆ ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಎಂ.ಮಂಜುನಾಥ ಶೆಟ್ಟಿ ಇವರ ನೇತೃತ್ವ್ವದಲ್ಲಿ ನಡೆದ ಪತ್ತೆ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣಾ ಪಿ.ಎಸ್.ಐ(ಕಾ.ಸು) ಉಮೇಶ್ ಕುಮಾರ್.ಎಂ.ಎನ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.