ಕರಾವಳಿ

ಪದವಿನಂಗಡಿ ಶಾಖೆಗೆ ಕರಾಟೆಯಲ್ಲಿ ಸಮಗ್ರ ಪ್ರಶಸ್ತಿ

Pinterest LinkedIn Tumblr

ಮಂಗಳೂರು: ಇತ್ತೀಚೆಗೆ ಪುತ್ತೂರಿನಲ್ಲಿ ನೆಡೆದ ಜೆ.ಎಸ್.ಕೆ.ಎ. ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ, ಮಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ಪದವಿನಂಗಡಿ ಶಾಖೆಯ ವಿದ್ಯಾರ್ಥಿಗಳು 25 ಚಿನ್ನದ ಪದಕ, 15 ಬೆಳ್ಳಿಯ ಪದಕ ಮತ್ತು 11 ಕಂಚಿನ ಪದಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೂಲ್ಕಿಯಲ್ಲಿ ನೆಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್ ನಲ್ಲಿ 12 ಚಿನ್ನದ ಪದಕ, 7 ಬೆಳ್ಳಿಯ ಪದಕ, 3 ಕಂಚಿನ ಪದಕಗಳನ್ನು ಪಡೆದಿರುತ್ತಾರೆ. ಇವರು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್. ಸುವರ್ಣ ಮತ್ತು ಶಿಕ್ಷಕರಾದ ಶಿವಪ್ರಸಾದ್ ಡಿ. ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Comments are closed.