ಕರಾವಳಿ

ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ : ಎಸ್‌ಪಿ ಡಾ.ಬಿ.ಆರ್.ರವಿಕಾಂತೇ ಗೌಡ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ವತಿಯಿಂದ ಭಾನುವಾರ ನಗರದ ಪುಟ್ಭಾಲ್ ಮೈದಾನದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜರಗಿತು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ ಅವರು, ಕ್ರೀಡೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಒತ್ತಡದಿಂದ ಕಾರ್ಯನಿರ್ವಹಿಸುವ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ಮನಪಾ ಆಯುಕ್ತ ಮೊಹಮ್ಮದ್ ನಝೀರ್, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಾರ್ತಾಧಿಕಾರಿ ಖಾದರ್ ಶಾ, ಅನ್ನು ಮಂಗಳೂರು, ಕೆ.ಆನಂದ ಶೆಟ್ಟಿ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಸ್ವಾಗತಿಸಿದರು. ಹರೀಶ್ ಮೋಟುಕಾನ ವಂದಿಸಿದರು. ಸಂಘದ ಉಪಾಧ್ಯಕ್ಷ ಶರತ್ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು.

ವೈವಿಧ್ಯಮಯ ಸ್ಪರ್ಧೆ:

ಪತ್ರಕರ್ತರಿಗೆ ಬಾಳೆ ಹಣ್ಣು ತಿನ್ನುವ ಸ್ಪರ್ಧೆ, ಐಸ್‍ಕ್ರೀಂ ತಿನ್ನುವ ಸ್ಪರ್ಧೆ, ಚಕ್ಕುಲಿ ತಿನ್ನುವ ಸ್ಪರ್ಧೆ, ಸ್ಲೋ ಬೈಕ್ ರೇಸ್, 100 ಮೀ.ಓಟ, ಸಂಗೀತ ಕುರ್ಚಿ, ಗೋಣಿ ಚೀಲ ಓಟ, ಮೂರು ಕಾಲಿನ ಓಟ, ಕ್ರಿಕೆಟ್ ಮೊದಲಾದ ಸ್ಪರ್ಧೆಗಳು ನಡೆದವು.

Comments are closed.