ಕರಾವಳಿ

ವಿದೇಶಕ್ಕೆ ಪರಾರಿಯಾಗಿದ್ದ ಹಳೇ ಆರೋಪಿ ವಿಮಾನ ನಿಲ್ದಾಣದಲ್ಲಿ ಸೆರೆ

Pinterest LinkedIn Tumblr

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಪ್ರಕರಣದ ಮುಖ್ಯ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಳಾಯಿಬೆಟ್ಟು ನಿವಾಸಿ ಮಹಮ್ಮದ್ ಅಶ್ರಫ್ (25 ) ಎಂದು ಹೆಸರಿಸಲಾಗಿದೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿಯ ಪತ್ತೆಯ ಬಗ್ಗೆ ಈ ಹಿಂದೆ ಎಲ್.ಓ.ಸಿ ಪ್ರಕಟಣೆ ಹೊರಡಿಸಿದ ಹಿನ್ನೆಲೆಯಲ್ಲಿ ಆರೋಪಿಯು ದುಬೈನಿಂದ ಮಂಗಳೂರು ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಾಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Comments are closed.