ಕರಾವಳಿ

ಜನವರಿ 19ರಂದು ಮುಖ್ಯಮಂತ್ರಿ ಮಂಗಳೂರಿಗೆ : ಸಚಿವರ ನೇತ್ರತ್ವದಲ್ಲಿ ಪೂರ್ವಭಾವಿ ಸಭೆ

Pinterest LinkedIn Tumblr

ಮಂಗಳೂರು ಜನವರಿ .01 : ಜನವರಿ 19ರಂದು ಮಂಗಳೂರಿನ ಕೇಂದ್ರ ಮೈದಾನಕ್ಕೆ ಮುಖ್ಯಮಂತ್ರಿಗಳು ಆಗಮಿಸಲಿದ್ದು, ಆಗಮನದ ವೇಳೆ ಕೈಗೊಳ್ಳಬೇಕಾಗಿರುವ ಬಂದೋಬಸ್ತ್ ಸಂಬಂಧ ಕಾರ್ಯಕ್ರಮ ಆಯೋಜಕರು ಮತ್ತು ಜಿಲ್ಲಾಡಳಿತ, ಪೊಲೀಸ್ ಕಮಿಷನರೇಟ್ ಅವರು ಪರಸ್ಪರ ಸಹಯೋಗದೊಂದಿಗೆ ಸಮಿತಿ ರಚಿಸಿ ಕ್ರಮಗಳನ್ನು ರೂಪಿಸಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸಲಹೆ ಮಾಡಿದರು.

ನಗರದ ನಾಗರಿಕರಿಗೆ ತೊಂದರೆಯಾಗದಂತೆ ಮತ್ತು ಕಾರ್ಯಕ್ರಮ ಆಯೋಜನೆ ವ್ಯವಸ್ಥಿತವಾಗಿ ನಡೆಯುವಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅವರು ನುಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಆರ್.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಉಪ ಪೊಲೀಸ್ ಆಯುಕ್ತೆ ಉಮಾ ಪ್ರಶಾಂತ್, ಮಂಗಳೂರು ಮಹಾ ನಗರಪಾಲಿಕೆಯ ಆಯುಕ್ತ ಮೊಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು.

Comments are closed.