ಕರಾವಳಿ

ಬೋಟ್ ಕಾಣೆ ಪ್ರಕರಣ: ಜ.6ರಂದು ರಾಷ್ಟ್ರೀಯ ಹೆದ್ದಾರಿ ತಡೆ: ವಿವಿಧ ಸಂಘಟನೆಗಳ ಬೆಂಬಲ

Pinterest LinkedIn Tumblr

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ಸಹಿತ 7 ಮಂದಿ ಮೀನುಗಾರರು ಇನ್ನೂ ಪತ್ತೆಯಾಗದ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಒತ್ತಡ ಹೇರಲು ಜ.6ರಂದು ಕರಾವಳಿಯ ಮೀನುಗಾರಿಕಾ ಸಂಘಟನೆಗಳು ಆಯೋಜಿಸಿದ ರಾಷ್ಟ್ರೀಯ ಹೆದ್ದಾರಿ ತಡೆಗೆ ಉಡುಪಿ ತಾಲೂಕು ಮಹಿಳಾ ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್‌.ಸಾಲ್ಯಾನ್‌ ಬೆಂಬಲ ಘೋಷಿಸಿದ್ದಾರೆ.

ಉಡುಪಿ ತಾಲೂಕು ಹಸಿ ಮೀನು ಮಾರಾಟಗಾರರ ಸಂಘ ಸೇರಿದಂತೆ ಕುಂದಾಪುರ ತಾಲೂಕು ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮೀನು ಮಾರುಕಟ್ಟೆಗಳಿಗೆ ಕಡ್ಡಾಯ ರಜೆ ಘೋಷಿಸಲಾಗಿದೆ.

ಮೀನು ಮಾರುಕಟ್ಟೆಗಳಲ್ಲಿ ವಹಿವಾಟು ನಡೆಯುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಹಕರು ಸಹಕರಿಸಬೇಕು. ಉಡುಪಿ ಮತ್ತು ಕುಂದಾಪುರದ ಎರಡೂ ಸಂಘಟನೆಗಳ ಮಹಿಳೆಯರು ಬೆಳಗ್ಗಿನಿಂದಲೇ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಡುಪಿ ತಾಲೂಕು ಮಹಿಳಾ ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್‌. ಸಾಲ್ಯಾನ್‌ ಮತ್ತು ಕುಂದಾಪುರ ತಾಲೂಕು ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷೆ ರತ್ನ ಮೊಗವೀರ ಬೀಜಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.