ಕರಾವಳಿ

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಮಾಧ್ಯಮ ಅಗತ್ಯ : ಟಿ.ಆರ್. ಸುರೇಶ್

Pinterest LinkedIn Tumblr

ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವಲ್ಲಿ ಮಾಧ್ಯಮಗಳು ಅತ್ಯಗತ್ಯ ಎಂದು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅಭಿಪ್ರಾಯಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಉರ್ವ ಚರ್ಚ್ ಸಭಾಂಗಣದಲ್ಲಿ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕರಿಗೆ ಪ್ರಸ್ತಿ ಪ್ರದಾನ ಮಾಡಿ ಮಾತನಾಡಿದರು.

ದಿನವಿಡೀ ಸಮಾಜದ ಆಗುಹೋಗುಗಳ ಬಗ್ಗೆ ಎಚ್ಚೆತ್ತುಕೊಂಡಿರುವ ಮಾಧ್ಯಮ ಮಿತ್ರರು ತಮ್ಮಲ್ಲಿರುವ ವಿಭಿನ್ನ ರೀತಿಯ ಪ್ರತಿಭೆಗಳನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಆಯೋಜಿಸುವ ಈ ಕಾರ್ಯಕ್ರಮ ಅತ್ಯುತ್ತಮ. ಅದಕ್ಕಿಂತಲೂ ಮುಖ್ಯವಾಗಿ ಸಾಮಾನ್ಯ ರೈತನೊಬ್ಬ, ಸರಕಾರದ ನೆರವಿಲ್ಲದೆ, ಯಾವ ರೀತಿಯಲ್ಲಿ ಸಾಧನೆಯನ್ನು ಮಾಡಬಲ್ಲ ಎಂಬುದನ್ನು ಸಮಾಜಕ್ಕೆ ತಿಳಿಸುವುದಲ್ಲದೆ, ಆತನಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಮಹತ್ವ ಕಾರ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಯಾವುದೇ ಗ್ಯಾರಂಟಿಯೇ ಇಲ್ಲದಿದ್ದರು, ಸಾಧಿಸಬೇಕೆಂಬ ಹಠದೊಂದಿಗೆ ಸ್ವಾಭಿಮಾನವನ್ನು ಬಿಡದೆ ಸಾಧನೆ ಮಾಡಿದ ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುವುದು ಪ್ರಶಸ್ತಿಗೆ ನೀಡುವ ಗೌರವ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಹಮ್ಮದ್ ಆರಿಫ್ ಪಡುಬಿದ್ರೆ ಪ್ರಶಸ್ತಿ ವಿಜೇತ ಅಮೈ ಮಾಲಿಂಗ ನಾಯ್ಕರ ಪರಿಚಯ ನೀಡಿದರು.ಇದೇ ವೇಳೆ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಆರ್. ರಾಮಕೃಷ್ಣ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಿರ್ವಹಿಸಿದರು.ವೇದಿಕೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು.ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ , ಪತ್ರಿಕಾ ಭವನ ಅಧ್ಯಕ್ಷ ಕೆ. ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕೆ ಮುಂಚಿತವಾಗಿ ಪತ್ರಕರ್ತ ದಯಾನಂದ ಕುಡುಪು ಮತ್ತು ಬಳಗದಿಂದ ಸ್ಯಾಕ್ಯೋಫೋನ್ ವಾದನ ನಡೆಯಿತು. ಆತ್ಮಭೂಷಣ್ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರ ಶೆಟ್ಟಿ ಸಭಾ ಕಾರ್ಯಕ್ರಮವನ್ನು ನಿರೂಪಿಸಿದರು. ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತರಿಂದ ಯಕ್ಷಗಾನ ನರಕಾಸುರ ಮೋಕ್ಷ , ಮೈಂದ -ದ್ವಿವಿದ ಕಾಳಗ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Comments are closed.