ಕರಾವಳಿ

ಜಿಲ್ಲಾಡಳಿತದಿಂದ ತಂಬಾಕು ಮುಕ್ತ ಶಾಲೆ : ಶಾಲಾ ವಲಯದಲ್ಲಿ ತಂಬಾಕು ನಿಂಯತ್ರಣಕ್ಕೆ ಸಮಿತಿ ರಚನೆ

Pinterest LinkedIn Tumblr

ಮಂಗಳೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ದಕ್ಷಿಣ ಕನ್ನಡ ಜಿಲ್ಲೆಯ 300 ಶಾಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಈಗಾಗಲೇ ಅಷ್ಟೂ ಶಾಲೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಯನ್ನು ರಚಿಸಲಾಗಿದೆ ಹಾಗೂ ಈ ಮೂಲಕ ತಂಬಾಕು ಮುಕ್ತ ಶಾಲೆಯನ್ನಾಗಿಸಲು ಪ್ರಯತ್ನ ನಡೆದಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಯೋಜನಾಧಿಕಾರಿಗಳು ಹೇಳಿದರು.

ಅಪರ ಜಿಲ್ಲಾಧಿಕಾರಿ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಜಿಲ್ಲೆಯನ್ನು ತಂಬಾಕು ಮುಕ್ತ ಪ್ರದೇಶವಾಗಿಸುವ ಕುರಿತು ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಕ್ಷಯ ರೋಗಿಗಳಿಗೆ ಕಡ್ಡಾಯವಾಗಿ ತಂಬಾಕು ವ್ಯಸನಮುಕ್ತ ಕೇಂದ್ರದ ಸೇವೆ ನೀಡುವ ಬಗ್ಗೆ ರೂಪಿಸಿದ ಯೋಜನೆಯ ಬಗ್ಗೆ ವಿವರಿಸಿದರು.

ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಧೂಮಪಾನ ಮುಕ್ತ ಪ್ರದೇಶ ಸಂಬಂಧ ಮಾಹಿತಿ ಫಲಕಗಳು ಎಲ್ಲ ಸರ್ಕಾರಿ ಕಚೇರಿಗಳಲ್ಲಿರಬೇಕು. ಅರಿವು ಮೂಡಿಸುವ ಕಾರ್ಯಕ್ರಮಗಳು ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ, ಸ್ತ್ರೀ ಶಕ್ತಿ ಸಂಘಟನೆಗಳ ಜೊತೆ ಸೇರಿ ನಡೆಸಲು ಅವರು ನಿರ್ದೇಶನ ನೀಡಿದರು.

ನಿಯಂತ್ರಣ ಘಟಕದ ಪ್ರತಿನಿಧಿಗಳು ಮಾತನಾಡಿ, ಪೊಲೀಸ್ ಇಲಾಖೆಯ ಸಹಕಾರದೊಂದಿಗೆ 10 ದಿನದ 2003 ಕಾಯ್ದೆಯ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದೆ. ಸಾರ್ವಜನಿಕ ಪ್ರದೇಶದಲ್ಲಿ ತಂಬಾಕು ಸೇವನೆ ಕಂಡುಬಂದಲ್ಲಿ ದಂಡ ವಿಧಿಸಲು ವಿವಿಧ ಅಧಿಕಾರಿಗಳಿಗೆ ಅವಕಾಶವಿದ್ದು, ಅಧಿಕಾರಿಗಳಿಗೂ ಈ ನಿಟ್ಟಿನಲ್ಲಿ ತರಬೇತಿ ನೀಡಲು ಸೂಚನೆ ನೀಡಿದರು.

ಶಾಲಾ ವಲಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಜೊತೆಗೆ ವಿವಿಧ ಕಾಲೇಜುಗಳಲ್ಲಿ, ಅದರಲ್ಲೂ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ವಲಯಗಳಲ್ಲಿ ಅಭ್ಯಸಿಸುತ್ತಿರುವ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿ ಎಂದು ಹೇಳಿದರು.

Comments are closed.