ಕರಾವಳಿ

ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಪೂರ್ವಭಾವಿ ಸಭೆ

Pinterest LinkedIn Tumblr

ಮಂಗಳೂರು : ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅಪರ ಜಿಲ್ಲಾಧಿಕಾರಿ ಕುಮಾರ್ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖ್ಯಸ್ಥರಿಗೆ ನಿಗದಿಪಡಿಸಿದ ಹೊಣೆಯನ್ನು ಪರಸ್ಪರ ಸಮನ್ವಯದಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ನೆಹರು ಮೈದಾನ ಸಜ್ಜುಗೊಳಿಸುವಿಕೆ ಹಾಗೂ ಮೈದಾನದಲ್ಲಿ ಕಣ್ಣಳತೆಯ ದೂರದಲ್ಲಿ ಕುಡಿಯುವ ನೀರು ಲಭ್ಯವಾಗಿಸುವಿಕೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಉಪಹಾರ ವ್ಯವಸ್ಥೆ, ಪರೇಡ್ ರಿಹರ್ಸಲ್ ಬಗ್ಗೆ ಸಭೆಯಲ್ಲಿ ಸವಿವರ ಚರ್ಚೆ ನಡೆಯಿತು.

ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಮೀಳ, ಡಿಸಿಪಿ ಹನುಮಂತರಾಯ , ಸಹಾಯಕ ಆಯುಕ್ತ ರವಿಚಂದ್ರ ನಾಯಕ್ ಮುಂತಾದವರಿದ್ದರು.

Comments are closed.