ಕರಾವಳಿ

ಹೊಸ ತಂತ್ರಜ್ಞಾನಗಳ ಅವಿಷ್ಕಾರದಿಂದ ಜೀವಕ್ಕೆ ಅಗುವ ತೊಂದರೆಗಳು

Pinterest LinkedIn Tumblr

ಹೊಸ ಹೊಸ ಅವಿಷ್ಕಾರಗಳು, ವಿವಿಧ ತಂತ್ರಜ್ಞಾನಗಳು ಮನುಷ್ಯನ ಜೀವನಕ್ಕೆ ಸೇರಿಕೊಳ್ಳುತ್ತಲೇ ಇವೆ, ಆದರೆ ಅದರಿಂದ ಎಷ್ಟು ಉಪಯೋಗವೂ ಅಷ್ಟೇ ಕೆಡುಕು ಅಥವ ಅಪಾಯ ಕೂಡ ಇರುತ್ತದೆ. ಈಗ ಇಂತಹದ್ದೇ ಒಂದು ತಂತ್ರಜ್ಞಾನದಿಂದ ಹಲವು ತೊಂದರೆಗಳು ಅನುಭವಿಸುವಂತಗಿದೆ.

ಹೌದು ಮನೆಯಲ್ಲಿ ಗ್ಯಾಸ್ ಗೀಸರ್ ಬಳಕೆ ಮಾಡುವಾಗ ತುಂಬಾ ಎಚ್ಚರಿಕೆಯಿಂದಿರಬೇಕು ಇಲ್ಲ ಅಂದರೆ ಅಪಾಯ ಕಟ್ಟಿ ಇತ್ತ ಬುತ್ತಿ, ಗ್ಯಾಸ್ ಗೀಸರ್ ನಿಂದ ಹೊರಗೆ ಬಂದ ಕಾರ್ಬನ್ ಮಾನಾಕ್ಸೈಡ ಹಲವು ಬಲಿಯಾಗಿದೆ.

ಗ್ಯಾಸ್ ಗೀಜರ್ನಿಂದ ಉತ್ಪತ್ತಿಯಾದ ಕಾರ್ಬನ್ಮಾ ನಾಕ್ಸೈಡ್ನಿಂದ ಉಸಿರುಗಟ್ಟಿ ಮರಣ ಹೊಂದುವ ಸಂಭವು ಹೆಚ್ಚಾಗಿರುತ್ತದೆ.

ಅದಕ್ಕಾಗಿ ಗ್ಯಾಸ್ ಗೀಸರ್ ಹೇಗೆ ಅಳವಡಿಸಿಕೊಳ್ಳಬೇಕು ಅನ್ನೋದರ ಬಗ್ಗೆ ಕೆಲವೊಂದು ಸಲಹೆಗಳು ಇಲ್ಲಿವೆ ನೋಡಿ.

ಆಮ್ಲಜನಕ ಚೆನ್ನಾಗಿ ಹರಿದಾಡುವ ರೂಮಿನಲ್ಲಿ ಮಾತ್ರ ಗ್ಯಾಸ್ ಗೀಜರ್ ಅಳವಡಿಸಬೇಕು.

ಸ್ನಾನದ ಮನೆಯಲ್ಲಿ ಕಿಟಕಿಗಳು ಇರುವಂತೆ, ಹಾಗೂ ಆ ಕಿಟಕಿಯಲ್ಲಿ ಒಳಗಿನ ಗಾಳಿ ಹೊರಗೆ ಮತ್ತು ಹೊರಗಿನ ಗಾಳಿ ಒಳಗೆ ಬರುವಂತೆ ಎರಡೂ ದಿಕ್ಕುಗಳಲ್ಲೂ ಕಿಟಕಿ ಅಥವಾ ವೆಂಟಿಲೇಟರ್ ಇರುವಂತೆ ನೋಡಿಕೊಳ್ಳಿ.

ಕಿಟಕಿಗಳು ಇಲ್ಲದಿದ್ದರೆ ಗ್ಯಾಸ್ ಗೀಜರ್ನಿಂದ ಬಿಸಿ ನೀರನ್ನು ಮೊದಲೇತುಂಬಿಸಿ ಇಟ್ಟುಕೊಂಡು ಗ್ಯಾಸ್ ಆಫ್ ಮಾಡಿದನಂತರವಷ್ಟೆ ಸ್ನಾನಕ್ಕೆ ಹೋಗುವುದು ಉತ್ತಮ. ಗ್ಯಾಸ್ ಗೀಜರ್ನಿಂದ ನೀರು ತುಂಬಿಸುವಾಗಲೂ ಸ್ನಾನ ಗೃಹದ ಬಾಗಿಲು ತೆರೆದಿರಲಿ.

ಗ್ಯಾಸ್ ಆಫ್ ಮಾಡಿದ ಕೆಲವು ನಿಮಿಷಗಳ ನಂತರ ಸ್ನಾನಕ್ಕೆ ಹೋಗುವುದು ಒಳ್ಳೆಯದು. ಮಕ್ಕಳನ್ನು ಸ್ನಾನ ಮಾಡಿಸುವಾಗ ಸ್ನಾನ ಗೃಹದ ಬಾಗಿಲು ಅರ್ಧ ತೆರೆದು ಗಾಳಿ ಆಡುವಂತೆ ನೋಡಿಕೊಳ್ಳಿ.

ಗ್ಯಾಸ್ ನಲ್ಲಿ ಆಮ್ಲಜನಕ ಸರಬರಾಜು ಕಡಿಮೆ ಆದಾಗ ಅದು ಅರ್ಧದಷ್ಟು ಮಾತ್ರ ಉರಿಯುತ್ತಿರುತ್ತದೆ. ಅದು ಮುನ್ನೆಚ್ಚರಿಕೆ, ಎಚ್ಚರಿಕೆ ತೆಗೆದುಕೊಳ್ಳುವ ಮೊದಲೇ ಅನಾಹುತ ಸಂಭವಿಸಿಬಿಡುವುದರಿಂದ ಎಷ್ಟು ಬೇಗ ಸ್ನಾನ ಗೃಹದಿಂದ ಹೊರಗೆ ಬರುತ್ತೀರೋ ಅಷ್ಟು ಉತ್ತಮ.

ಗ್ಯಾಸ್ ಗೀಜರ್ನಿಂದ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್ ಮೊದಲು ನೆಲ ಮಟ್ಟದಿಂದ ಸ್ನಾನದ ಮನೆಯಲ್ಲಿ ಶೇಖರಣೆ ಗೊಳ್ಳುತ್ತಾ ಹೋಗುತ್ತದೆ, ಇದರಿಂದ ಕುಳಿತು ಸ್ನಾನ ಮಾಡುವವರ ಮೂಗಿಗೆ ತಕ್ಷಣ ಸೋಕಿ ಬೇಗ ಸಾವು ಸಂಭವಿಸುತ್ತದೆ.
ನಿಂತು ಸ್ನಾನ ಮಾಡುವಾಗ 3 ರಿಂದ 4 ನಿಮಿಷದೊಳಗೆ ಸಾವು ಸಂಭವಿಸುತ್ತದೆ, ಅಷ್ಟರಲ್ಲಿ ಸ್ನಾನ ಮುಗಿದು ಬಾಗಿಲು ತೆರೆದರೆ ಅವರು ಅದೃಷ್ಟವಂತರು.

Comments are closed.