ಕರಾವಳಿ

ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಪರೀಕ್ಷೆ : ವಂಚನೆಕೋರರ ಸುಳ್ಳು ವದಂತಿಗೆ ಕಿವಿಕೊಡಬೇಡಿ

Pinterest LinkedIn Tumblr

ಮಂಗಳೂರು ಜನವರಿ 17 : ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ಸಿವಿಲ್) 190 ಹುದ್ದೆಗಳ ನೇಮಕಾತಿ ಸಲುವಾಗಿ ನೇಮಕಾತಿ ಪ್ರಕ್ರಿಯೆಯನ್ವಯ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ದಿನಾಂಕ: 13-01-2019 ರಂದು ಬೆಂಗಳೂರು ನಗರ, ಮೈಸೂರು ನಗರ, ಬೆಳಗಾವಿ, ದಾವಣಗೆರೆ ಮತ್ತು ಕಲಬುರಗಿ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

ಸದರಿ ಲಿಖಿತ ಪರೀಕ್ಷೆಯ ಸಂಬಂಧ ಕೆಲವೊಂದು ಮಾಧ್ಯಮಗಳಲ್ಲಿ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿರುವ ಬಗ್ಗೆ ಪ್ರಸಾರವಾಗಿರುತ್ತದೆ. ಇದು ಕೇವಲ ವದಂತಿಯಾಗಿದ್ದು, ಕೆಲವು ವಂಚನೆಕೋರರು ಅಭ್ಯರ್ಥಿಗಳಿಗೆ ಮೋಸ ಮಾಡುವ ಸಲುವಾಗಿ ಪಿಎಸ್‍ಐ (ಸಿವಿಲ್) ಹುದ್ದೆಯ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ನಮ್ಮಲ್ಲಿ ಲಭ್ಯವಿರುವುದಾಗಿ ನಂಬಿಸಿ, ಹಣಕ್ಕಾಗಿ ಅಭ್ಯರ್ಥಿಗಳನ್ನು ತಪ್ಪು ದಾರಿಗೆಳೆಯುವ ಸಂಚು ರೂಪಿಸಿ, ವಂಚನೆ ಮಾಡುವ ದೃಷ್ಠಿಯಿಂದ ಅಭ್ಯರ್ಥಿಗಳಿಗೆ ದಿಕ್ಕು ತಪ್ಪಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಕೆಲವೊಂದು ವಂಚನೆಕೋರರಿಗೆ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಸದರಿ ಪರೀಕ್ಷೆಯು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಯಶಸ್ವಿಯಾಗಿ ನಡೆದಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಯಾವುದೇ ಸುಳ್ಳು ವದಂತಿಗೆ ಕಿವಿಕೊಡದೆ ಸಮಾಧಾನದಿಂದಿರಬೇಕು ಮತ್ತು ಆತಂಕ ಪಡುವ ಅಗತ್ಯವಿಲ್ಲವೆಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ನೇಮಕಾತಿ ರಾಘವೇಂದ್ರ ಔರಾದ್‍ಕರ್ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

Comments are closed.