ಕರಾವಳಿ

ಮಂಗಳೂರು : ಪೊಲೀಸ್ ಅಧಿಕಾರಿಗಳ ವರ್ಗಾವಣೆ

Pinterest LinkedIn Tumblr

ಮಂಗಳೂರು, ಜನವರಿ.20: ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಜೀತ್ ವಿ.ಜೆ.ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಶ್ರುತಿ ಅವರನ್ನು ಚಿಕ್ಕಮಗಳೂರು ಜಿಲ್ಲಾ ಹೆಚ್ಚುವರಿ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ತೆರವಾಗಿರುವ ಹುದ್ದೆಗೆ ಯಾರನ್ನೂ ನಿಯೋಜಿಸಿಲ್ಲ.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ. ರಾಮರಾವ್ ಅವರನ್ನು ಬಳ್ಳಾರಿ ನಗರ ಉಪವಿಭಾಗಕ್ಕೆ ವರ್ಗ ಮಾಡಿ ಆದೇಶ ಮಾಡಲಾಗಿದೆ. ನಗರ ಎಸಿಪಿಯಾಗಿ ರಾಮರಾವ್ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ವ್ಯಾಪ್ತಿಯಲ್ಲಿ ಗಾಂಜಾ, ಮಟ್ಕಾ ದಂಧೆಯನ್ನು ಹತ್ತಿಕ್ಕುವಲ್ಲಿ ಶ್ರಮಿಸಿದ್ದರು.

Comments are closed.