ಕರಾವಳಿ

“ಮಲಬಾರ್ ಗೋಲ್ಡ್ “ ಸಂಸ್ಥೆಯ ಬಗ್ಗೆ ವಾಟ್ಸಪ್‌ನಲ್ಲಿ ಅವಹೇಳನಕಾರಿ ಸಂದೇಶ ಕಳುಹಿಸಿದ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು : “ಮಲಬಾರ್ ಗೋಲ್ಡ್ “ ಸಂಸ್ಥೆಯ ಬಗ್ಗೆ ವಾಟ್ಸಪ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಭಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಮಜಲಾರ್ ಹೌಸ್ ನಿವಾಸಿ ಭುಜೇಶ್ ಎ(37 ) ಎಂದು ಹೆಸರಿಸಲಾಗಿದೆ.

ಸಾಮಾಜಿಕ ಜಾಲತಾಣವಾದ ವಾಟ್ಸಪ್ ಗ್ರೂಪ್ ಗಳಲ್ಲಿ ಕೆಲವರು ಮಲಬಾರ್ ಗೋಲ್ಡ್ ಸಂಸ್ಥೆಯ ಬಗ್ಗೆ ಅವಹೇಳನಕಾರಿ ಸುಳ್ಳು ವದಂತಿಗಳನ್ನು ಹರಿದಾಡಿಸಿ, ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ ಮಲಬಾರ್ ಗೋಲ್ಡ್ ನಲ್ಲಿ ಕೆಲಸ ಮಾಡುತ್ತಿರುವ ಕೆಲಸಗಾರರಿಗೆ, ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಭೀತಿಯನ್ನುಂಟು ಮಾಡಿರುತ್ತಾರೆ ಎಂಬುದಾಗಿ ಮಲಬಾರ್ ಗೋಲ್ಟ್ ಸಂಸ್ಥೆ ಯ ಮಾರ್ಕೆಟಿಂಗ್ ಮ್ಯಾನೇಜರ್ ರವರು ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಮಲಬಾರ್ ಗೋಲ್ಡ್ ಸಂಸ್ಥೆಯ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ವಾಟ್ಸಪ್ ಸಾಮಾಜಿಕ ಜಾಲತಾಣದಲ್ಲಿ ಭಿತ್ತರಿಸಿದ ಆರೋಪಿ ಭುಜೇಶ್ ಎಂಬಾತನನ್ನು
ಕೇರಳ ರಾಜ್ಯದ ಮಂಜೇಶ್ವರ ಕುಂಟಗಲಡ್ಕ ಎಂಬಲ್ಲಿಂದ ಬಂಧಿಸಿದ್ದಾರೆ.

ಆರೋಪಿ ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್ ಹ್ಯಾಂಡ್ ಸೆಟ್ಟನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂದೇಶವನ್ನು ಈತನಿಗೆ ಫಾರ್ವರ್ಡ್ ಮಾಡಿದವರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಸ್ಕರ ಒಕ್ಕಲಿಗ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರು ಆರೋಪಿಯನ್ನು ಬಂಧಿಸಿರುತ್ತಾರೆ. ಆರೋಪಿ ಪತ್ತೆಗೆ ಪಿಎಸ್ಐರವರುಗಳಾದ ರಾಜೇಂದ್ರ ಬಿ, ಮಂಜುಳಾ ಎಲ್ ಹಾಗೂ ಸಿಬ್ಬಂಧಿಗಳು ಸಹಕರಿಸಿರುತ್ತಾರೆ.

Comments are closed.