ಕರಾವಳಿ

ರುದ್ರಾಕ್ಷಿಯ ಧಾರಣೆಗೂ, ಆರೋಗ್ಯ ಸುಧಾರಣೆಗೂ ಇರುವ ಸಂಬಂಧ..ಬಗ್ಗೆ ತಿಳಿಯಿರಿ !

Pinterest LinkedIn Tumblr

ರುದ್ರಾಕ್ಷಿ ನೇಪಾಳದಲ್ಲಿ ಸಮೃದ್ಧವಾಗಿ ಬೆಳೆಯುವ ವೃಕ್ಷ. ಸಾಧು ಸಂತರು ಇದನ್ನು ಮಾಲೆಯಾಗಿ ಅಲಂಕರಿಸಿಕೊಳ್ಳುವುದನ್ನು ನಾವು ನೋಡಿದ್ದೇವೆ. ಇದು ಕೇವಲ ಅಲಂಕಾರಿಕ ವಸ್ತು ಅಲ್ಲ ಹಲವಾರು ರೋಗಗಳಿಗೆ ದಿವ್ಯೌಷಧ ಕೂಡ ಹೌದು. ರುದ್ರಾಕ್ಷಿ ‘ಸಿ’ ಜೀವಸತ್ವದ ಆಗರ. ಇದಕ್ಕೆ ಹೃದಯದ ಕ್ರಿಯೆಯನ್ನು ಚುರುಕುಗೊಳಿಸುವ ಸಾಮರ್ಥ್ಯವಿದೆ.

* ರುದ್ರಾಕ್ಷಿಯನ್ನು ತದೇಕ ದೃಷ್ಟಿಯಿಂದ ದೀರ್ಘಕಾಲದವರೆಗೆ ನೋಡುತ್ತಿದ್ದರೆ ಕಣ್ಣಿನ ದೋಷಗಳು ನಿವಾರಣೆಯಾಗುವವು.

* ರುದ್ರಾಕ್ಷಿಯಲ್ಲಿರುವ ಕಫ ನಾಶಕ ಗುಣ ಅಸ್ತಮಾ, ನೆಗಡಿ ಮುಂತಾದವನ್ನು ಶಮನಗೊಳಿಸುತ್ತದೆ.

* ದೇಹದಲ್ಲಿರುವ ಕೊಬ್ಬನ್ನು ಕರಗಿಸಲು ರುದ್ರಾಕ್ಷಿ ಸಹಾಯಕಾರಿ.

* ರುದ್ರಾಕ್ಷಿಯನ್ನು ಜಪಸರವಾಗಿ ಬಳಸುವುದರಿಂದ ಮಣಿಗಳ ಎಣಿಕೆಯ ಸಮಯದಲ್ಲಿ ಹೆಬ್ಬೆರಳು, ತೋರು ಬೆರಳಿನ ತುದಿಗಳಲ್ಲಾಗುವ ಒತ್ತಡದ ಕಾರಣ ಕಣ್ಣು, ಮಿದುಳು, ಪಿಟ್ಯುಟರಿ ಗ್ರಂಥಿಗಳಿಗೆ ರಕ್ತದ ಸರಬರಾಜು ಸರಾಗವಾಗುತ್ತದೆ.

ರುದ್ರಾಕ್ಷಿ ಒಂದು ಪವಿತ್ರ ವಸ್ತು
ರುದ್ರಾಕ್ಷಿ ಪವಿತ್ರ ವಸ್ತು . ಪುರಾಣದ ಪ್ರಕಾರ ತ್ರಿಪುರಾಸುರ ರಾಕ್ಷಸನ ಸಂಹಾರದ ನಂತರ , ಪರಶಿವನ ಕಣ್ಣಿನಿಂದ ಬಂದ ಆನಂದದ ಅಶ್ರು ಬಿಂದುಗಳು ರುದ್ರಾಕ್ಷಿ ಮಣಿಗಳಾದವು. ಶಿವನಿಗೆ ಬಹಳ ಪ್ರಿಯವಾದ ರುದ್ರಾಕ್ಷಿ ಮಣಿಗಳು ಶಿವಭಕ್ತರ ಕೊರಳ ಮಣಿ-ಮಾಲೆಯಾಗಿ ಉಪಯೋಗಿಸಲ್ಪಡುತ್ತದೆ. ಇದನ್ನು ಜಪಮಾಲೆಯಾಗಿಯೂ ಉಪಯೋಗಿದಸುತ್ತಾರೆ.

ಇನ್ನೊಂದು ಪುರಾಣದ ಕಥೆ: ಶಿವನು ದೀರ್ಘ ಕಾಲ ಧ್ಯಾನ ನಿರತನಾಗಿ ನಂತರ ಕಣ್ಣುಬಿಟ್ಟಾಗ ಅವನ ಕಣ್ಣಿನಿಂದ ಬಿದ್ದ ಒಂದು ಆನಂದ ಭಾಷ್ಪ ರುದ್ರಾಕ್ಷಿಯಾಗಿ ಅದರಿಂದ ರುದ್ರಾಕ್ಷಿಯ ಮರ ಹುಟ್ಟಿತೆಂದು ಹೇಳಲಾಗಿದೆ. ಅದು ಶಿವನ ಮೂರನೇಕಣ್ಣಿನ ರೂಪವಾದ್ದದು ಜನರ ಕಣ್ಣೀರನ್ನು ಒರೆಸುವ ಎಂದರೆ ದುಃಖವನ್ನು ದೂರಮಾಡುವ ಗುಣ ಹೊಂದಿದೆ ಎಂದು ಕೆಲವರು ಹೇಳುತ್ತಾರೆ.

ಇನ್ನೊಂದು ಕಥೆಯಂತೆ ಶಿವನು ತಾರಕಾಸುರನನ್ನು ಸಂಹರಿಸಿದ ಮೇಲೆ ಅವನ ಮಕ್ಕಳಾದ ತದಿನ್ಮಾಲಿ (ವಿದ್ಯುನ್ಮಾಲಿ), ತಾರಕಾಕ್ಷ, ಕಮಲಾಕ್ಷ , ಗುಣವಂತರಾಗಿ ದೇವತೆಗಳ ಸಾಲಿಗೆ ಸೇರಿದರು. ಆದರೆ ಕೆಲವು ಕಾಲಾನಂತರ ದುಷ್ಱರಾಗಿ ಜನರಿಗೆ ತೊಂದರೆ ಕೊಟ್ಟರು . ಅವರನ್ನು ಶಿವನು ಸಂಹರಿಸಿದನು. ಹೀಗೆ ತನ್ನ ಭಕ್ತರು ದುಷ್ಱರಾಗಿ ಸತ್ತುದನ್ನು ನೋಡಿ ಶಿವನ ಕಣ್ಣಿನಿಂದ ನೀರ ಹನಿಗಳು ಉದುರಿದವು . ಅವೇ ಮರಗಳಾಗಿ ಅದರ ಸಂತತಿ ರುದ್ರಾಕ್ಷ್ಷಿಗಳನ್ನು ಕೊಡುತ್ತಿವೆ. ಒಂದು ಮರದಲ್ಲಿ ಸುಮಾರು 2000 ದಷ್ಟು ಹಣ್ಣು ಬಿಡುವುದು. ಅದರಲ್ಲಿ 108 ಮಣಿಗಳ ಜಪಮಾಲೆಗಳನ್ನು ಮಾಡುತ್ತಾರೆ . ಹಿಮಾಲಯದ ಯತಿಗಳು ಆ ಮರದ ಹಣ್ಣುಗಳನ್ನು (ಅದನ್ನೇ) ಅಮೃತ ಫಲವೆಂದು ತಿನ್ನುತ್ತಾರೆ.

ರುದ್ರಾಕ್ಷಿ ಯ ಲಭ್ಯತೆ
ರುದ್ರಾಕ್ಷಿ ಹಿಮಾಲಯ ತಪ್ಪಲು ಪ್ರದೇಶದಲ್ಲಿ ಮತ್ತು ನೇಪಾಳದಲ್ಲಿ ಬೆಳಯುತ್ತದೆ. ಆಗ್ನೇಯ ಏಷಿಯಾ ದೇಶಗಳಲ್ಲಿಯೂ ಬೆಳೆಯುತ್ತದೆ. ರುದ್ರಾಕ್ಷಿ ಕಾಯಿ ನೋಡಲು ನಸು ನೀಲಿ ಬಣ್ಣದ್ದಾಗಿರುತ್ತದೆ. ಇದು ಸಿಪ್ಪೆಯ ಭಾಗ. ಸಿಪ್ಪೆ ಸುಲಿದರೆ , ಒಳಗಡೆ ಹಸಿರು ಬಣ್ಣದ ರುದ್ರಾಕ್ಷಿ ಸಿಗುತ್ತದೆ. ಅದು ಚೆನ್ನಾಗಿ ಒಣಗಿದ ನಂತರ ನಸು ಶ್ವೇತವರ್ಣ, ತಾಮ್ರದ ನಸು ಕೆಂಪು, ಹಾಗೂ ನಸು ಕಪ್ಪು ಬಣ್ಣದವು ಸಿಗುತ್ತವೆ.

ಸೂಜಿಯನ್ನು ಉಪಯೋಗಿಸಿ ಮಡಿಕೆಗಳಿರುವ ರುದ್ರಾಕ್ಷಿಯ ಗೆರೆಗಳನ್ನು ಬಿಡಿಸುತ್ತಾರೆ. ಗೆರೆಗಳ ಆಕಾರವನ್ನು ನೋಡಿ ರುದಾಕ್ಷಿಯ ಮುಖಗಳನ್ನು ಗುರ್ತಿಸುತ್ತಾರೆ. ಅದರಲ್ಲಿ ಒಂದು ಮುಖದಿಂದ ಹಿಡಿದು 21 ಮುಖಗಳವರೆಗೂ ಇರವ ರುದ್ರಾಕ್ಷಿ ಸಿಗುವುದೆಂದು ಹೇಳುತ್ತಾರೆ. ಆದರೆ ೫ ಮುಖದಿಂದ 14 ಮುಖಗಳಿರುವ ರುದ್ರಾಕ್ಷಿಗಳು ಹೆಚ್ಚು ಇರತ್ತವೆ.

ಏಕ ಮುಖ ರುದ್ರಾಕ್ಷಿ ಬಹಳ ವಿರಳವಾಗಿ ದೊರೆಯುತ್ತವೆ. ಪಂಚಮುಖಿ ರುದ್ರಾಕ್ಷಿ ಹೆಚ್ಚಿನ ಸಂಖ್ಯೆಯಲ್ಲಿ ದೊರೆಯುತ್ತದೆ. ಒಂದೊಂದು ಬಗೆಯ ರುದ್ರಾಕ್ಷಿಗೂ ಅದರದೇ ಮಹತ್ವವಿದೆ. ಒಂದೊಂದು ಮುಖಕ್ಕೂ ಒಬ್ಬೊಬ್ಬ ದೇವತೆಯನ್ನು ಗುರುತಿಸುತ್ತಾರೆ. ಇದಲ್ಲದೆ ರುದ್ರಾಕ್ಷಿಗೆ ಔಷಧೀಯ ಗುಣಗಳಿವೆ. ಅನೇಕ ರೋಗಗಳಿಗೆ ಆಯುರ್ವೇದದಲ್ಲಿ ರುದ್ರಾಕ್ಷಿಯನ್ನು ಉಪಯೋಗಿಸುತ್ತಾರೆ.

ರುದ್ರಾಕ್ಷಿಗಳ ಸಂಕ್ಷಿಪ್ತ ಪರಿಚಯ:

ಏಕ ಮುಖ ರುದ್ರಾಕ್ಷಿ:
ಏಕ ಮುಖ ರುದ್ರಾಕ್ಷಿ ಯನ್ನು ಸಾಕ್ಷಾತ್ ಶಿವನ ಸ್ವರೂಪವೆಂದು ತಿಳಿಯುತ್ತಾರೆ . ಒಂದು ರುದ್ರಾಕ್ಷಿ ಮರದಲ್ಲಿ ಏಕಮುಖ ರುದ್ರಾಕ್ಷಿ ಯು ಒಂದೇ ಒಂದು ಬಿಡುತ್ತದೆ ಎಂದು ಹೇಳುತ್ತಾರೆ. ಇದು ಬಹಳ ಭಾಗ್ಯಶಾಲಿಯೂ, ಶಿವನಿಗೆ ಪ್ರೀತಿ ಪಾತ್ರನೂ ಆದವನಿಗೆ ಮಾತ್ರ ದೊರೆಯುತ್ತದೆ ಎಂಬ ನಂಬುಗೆ ಇದೆ. ಇದಕ್ಕೆ ಬೆಲೆ ಬಹಳ ಜಾಸ್ತಿ. ಅಂದರೆ ರೂ.ಸಾವಿರದಿಂದ ಇದರ ಬೆಲೆ ಆರಂಭವಾಗುತ್ತದೆ. ಈ ಬಗೆಯ ರುದ್ರಾಕ್ಷಿ ಧರಿಸಿದರೆ ಇಹದ ಎಲ್ಲಾ ಸೌಭಾಗ್ಯಗಳೂ ಈಶ್ವರನ ಕೃಪೆ ಸದಾ ದೊರೆಯುತ್ತದೆ ಎಂಬ ಧೃಢ ನಂಬುಗೆ ಇದೆ.

ದ್ವಿಮುಖ ರುದ್ರಾಕ್ಷಿ:
ಇದು ಶಿವ ಪಾರ್ವತಿ ಸ್ವರೂಪ ಎಂದು ಹೇಳುತ್ತಾರೆ ಈ ರುದ್ರಾಕ್ಷಿಯೂ ಸಿಗುವುದು ತುಂಬಾ ವಿರಳ. ಇದನ್ನು ಧರಿಸುವುದರಿಂದ ಗೋಹತ್ಯೆಯೇ ಮೊದಲಾದ ಇತರೆ ದೋಷಗಳೂ ನಾಶವಾಗುತ್ತದೆ. ಈ ರುದ್ರಾಕ್ಷಿಯು ಉತ್ತಮ ಗೃಹಸ್ತ ಜೀವನ ಸುಖ ಶಾಂತಿ, ಸೌಬಾಗ್ಯವನ್ನು ಕೊಡುವುದೆಂದು ಹೇಳಲಾಗುತ್ತದೆ. ಇದರ ಬೆಲೆಯೂ ತುಂಬಾ ಹೆಚ್ಚು

ತ್ರಿಮುಖ ರುದ್ರಾಕ್ಷಿ:
ಮೂರುಮುಖದ ಉದ್ರಾಕ್ಷಿ ಅಗ್ನಿ ದೇವನ ಸ್ವರೂಪ ಎಂದು ಹೇಳುತ್ತಾರೆ. ಇದೂ ಬಹಳ ಕಡಿಮೆ ಪ್ರಮಾಣದಲ್ಲಿ ದೊರೆಯುತ್ತದೆ. ಇದರ ಧಾರಣೆಯಿಂದ ಸಕಲ ಪಾಪಗಳೂ ನಿವಾರಣೆ ಆಗುವುದು . ಇದರ ಬೆಲೆಯೂ ಸ್ವಲ್ಪ ಹೆಚ್ಚಾಗಿಯೇ ಇದೆ.

ಚತುರ್ಮುಖ ರುದ್ರಾಕ್ಷಿ:
ಇದನ್ನು ಬ್ರಹ್ಮ ಸ್ವರೂಪ ಎಂದು ಗುರುತಿಸುತ್ತಾರೆ. ಇದು ಸಾಕಷ್ಟು ಪ್ರಮಾಣದಲ್ಲಿ ದೊರೆಯುವುದು. ಇದು ಬ್ರೂಣ ಹತ್ಯಾದೋಷವನ್ನು  ನಿವಾರಣೆ ಮಾಡುವುದು. ಸ್ಮರಣ ಶಕ್ತಿ, ಬುದ್ಧಿ, ಶಿಕ್ಷಣದಲ್ಲಿ ಸಫಲತೆ, ಇವು ದೊಕುವುದೆಂದು ಹೇಳುವರು. ಬೆಲೆ ಸಾಧಾರಣ ಮಟ್ಟದ್ದು.

ಪಂಚ ಮುಖಿ ರುದ್ರಾಕ್ಷಿ:
ಪಂಚ ಮುಖಿ ರುದ್ರಾಕ್ಷಿ ಯನ್ನು ಸ್ವಯಂ ಭಗವಾನ್ ಶಂಕರನ ಸ್ವರೂಪ ಎಂದು ತಿಳಿಯುತ್ತಾರೆ. ಹೆಚ್ಚಿನ ರುದ್ರಾಕ್ಷಿಗಳು ಪಂಚ ಮುಖಿ ಆಗಿರುತ್ತವೆ. ಈ. ರುದ್ರಾಕ್ಷಿ ಹೆಚ್ಚು ಸಿಗುವುದರಿಂದ ಬೆಲೆಯೂ ಕಡಿಮೆ. ಈ ರುದ್ರಾಕ್ಷಿಯನ್ನು ಧರಿಸುವುದರಿಂದ ಈಶ್ವರನ ಕೃಪೆ ದೊರಕಿ ಮನಸ್ಸಿಗೆ ಶಾಂತಿದೊರೆಯುವುದು ಎಂಬ ನಂಬುಗೆ ಇದೆ.

ಸಾಮಾನ್ಯವಾಗಿ ಪಂಚಮುಖಿ ರುದ್ರಾಕ್ಷಿಗಳಿಂದ ಜಪ ಮಾಲೆ ಮಾಡುತ್ತಾರೆ. 108 ಮಣಿ(ಬೀಜದ) /27 ಮಣಿಗಳ( ರುದ್ರಾಕ್ಷಿ ಬೀಜದ) ಅಥವಾ 10 ರುದ್ರಾಕ್ಷಿ ಮಣಿಗಳ ಮಾಲೆ ಮಾಡುವುದು ರೂಡಿಯಲ್ಲಿದೆ. ಜಪ ಮಾಡುವಾಗ ಅದನ್ನ್ಯು ಒಂದು ಕ್ರಮದಲ್ಲಿ ಬೆರಳುಗಳ ಮದ್ಯೆ ಇಟ್ಟುಕೊಂಡು , ಹೆಬ್ಬೆರಳಿನಿಂದ ಒಂದೊಂದು ಜಪಕ್ಕೂ ಒಂದೊಂದು ಮಣಿಯನ್ನು ಜಾರಿಸುತ್ತಾ ಜಪ ಮಾವುವರು. ಈ ರೀತಿ ಹಿಂದುಗಳು, ಸಿಖ್ಖರು, ಬೌದ್ಧರು, ಎಲ್ಲರೂ ಈ ರೀತಿ ಜಪ ಮಾಡುತ್ತಾರೆ.

ಷಷ್ಠ ಮುಖಿ ರುದ್ರಾಕ್ಷಿ:
ಆರು ಮುಖದ ರುದ್ರಾಕ್ಷಿ ಶಿವ ಪುತ್ರ ಕುಮಾರ ಕಾರ್ತಿಕೇಯನ ರೂಪವೆಂದು ತಿಳಿಯಲಾಗುತ್ತದೆ. ಈ ರುದ್ರಾಕ್ಷಿಯೂ ಹೆಚ್ಚಿ ಪ್ರಮಾಣದಲ್ಲಿ ದೊರೆಯುವುದು. ಈರುದ್ರಾಕ್ಷಿ ಧರಿಸುವುದರಿಂದ ಅಧರ್ಮಚರಣೆ ಮಾಡಿದ್ದಲ್ಲಿ ಅದರಿಂದ ಉಂಟದ ಪಾಪಗಳು ನಿವರಣೆ ಆಗುವುದು ಹಾಗೂ ಸ್ಮರಣ ಶಕ್ತಿ ಹೆಚ್ಚುವುದು ಎಂಬ ನಂಬುಗೆ ಇದೆ.

ಸಪ್ತ ಮುಖಿ ರುದ್ರಾಕ್ಷಿ:
ಏಳು ಮುಖದ ರುದ್ರಾಕ್ಷಿ ಅನಂತ ನಾಗನ (ಅಥವಾ ಆದಿ ಶೇಷನ )ಸ್ವರೂಪ ಎಂದು ಹೇಳುವರು. ಇದೂ ಸಹ ವಿರಳವಾಗಿ ದೊರೆಯುವುದು. ಆದ್ದರಿಂದ ಬೆಲೆ ಹೆಚ್ಚು. ಈ ರುದ್ರಾಕ್ಷಿ ಧಾರಣೆಯಿಂದ ಹಾವಿನ ಭಯ ಇರುವುದಿಲ್ಲ .ಶರೀರ ಧೃಢವಾಗಿ ಬುದ್ಧಿ ಚುರುಕಾಗುವಿದು – ಎಂದು ನಂಬಲಾಗಿದೆ.

ಅಷ್ಟ ಮುಖಿ ರುದ್ರಾಕ್ಷಿ:
ಎಂಟು ಮುಖದ ರುದ್ರಾಕ್ಷಿಯು ಗಣಪತಿಯ ರೂಪವಾಗಿದೆ. ಈ ರುದ್ರಾಕ್ಷಿ ಬಹಳ ಕಡಿಮೆ ಪ್ರಮಾಣದಲ್ಲಿ ದೊರಕುತ್ತದೆ. ಬೇಡಿಕೆ ಜಾಸ್ತಿ ಇರುವುದರಿಂದ, ಬೆಲೆ ಜಾಸ್ತಿ ಈ ರುದಾಕ್ಷಿಯನ್ನು ಧರಿಸುವುದಿಂದ ಕಾರ್ಯಗಳು ನಿರ್ವಿಗ್ನವಾಗಿ ನಡೆಯುತ್ತದೆ ಮತ್ತು ಸರ್ವ ಸಿದ್ಧಿಯುಂಟಾಗುವುದೆಂಬುದು ಭಕ್ತರ ನಂಬುಗೆ .

ನವ ಮುಖಿ ರುದ್ರಾಕ್ಷಿ:
ಒಂಭತ್ತು ಮುಖದ ರುದ್ರಾಕ್ಷಿಯನ್ನು ಭೈರವ ಮತ್ತು ನವ ದುರ್ಗ ಸ್ವರೂಪ ಎಂದು ತಿಳಿಯಲಾಗುತ್ತದೆ. ಈ ರುದ್ರಾಕ್ಷಿಯೂ ಕೂಡಾ ಬಹಳ ಕಡಿಮೆ ಪ್ರಮಾಣದಲ್ಲಿ ದೊರೆಯುವುದು. ಆದ್ದರಿಂದ ಬೆಲೆಯೂ ಹೆಚ್ಚು. ಈ ರುದ್ರಾಕ್ಷಿಯನ್ನು ಧರಸುವುದರಿಂದ ಉತ್ತಮ ಸಂತಾನ ಪ್ರಾಪ್ತಿಯಾಗುವುದೆಂದು ಹೇಳುತ್ತಾರೆ.

ದಶ ಮುಖಿ ರುದ್ರಾಕ್ಷಿ:
ಹತ್ತುಮುಖದ ಉದ್ರಾಕ್ಷ ಭಗವಾನ್ ನಾರಾಯಣನ ಸ್ವರೂಪೆಂದು ನಂಬುಗೆ. ಈ ರುದ್ರಾಕ್ಷಿ ಧಾರಣೆಯಿಂದ ಇಹದ ಎಲ್ಲಾ ಸೌಲಭ್ಯಗಳೂ ಲಭಿಸುತ್ತದೆ ಮತ್ತುಸದಾ ಸುಖ ಶಾಂತಿ ಇರುತ್ತದೆ ಎಂದು ಹೇಳುತ್ತಾರೆ.

ಏಕಾದಶ ಮುಖದ ರುದ್ರಾಕ್ಷಿ:
ಹನ್ನೊಂದು ಮುಖದ ರುದ್ರಾಕ್ಷಿ ಪರಶವನ ರುದ್ರ ಸ್ವರೂಪ (ಏಕಾದಶ ರುದ್ರರು) ಎಂದು ಹೇಳುತ್ತಾರೆ. ಇದೂ ಕಡಿಮೆ ಪ್ರಮಾಣದಲ್ಲಿ ದೊರಕುತ್ತದೆ. ಸಾಮಾನ್ಯವಾಗಿ ಸಂನ್ಯಾಸಿಗಳು, ಯತಿಗಳು, ಸಾಧಕರು ಇದನ್ನು ಧರಿಸುತ್ತಾರೆ. ಯಜ್ಞ ಯಾಗಾದಿಗಳ ಫಲ ಈ ರುದ್ರಾಕ್ಷಿ ಧರಿಸುವುದರಿಂದ ಸಿದ್ಧಿಸುತ್ತದೆ ಎಂದು ನಂಬಿಕೆ ಇದೆ.

ದ್ವಾದಶ ಮುಖಿ ರುದ್ರಾಕ್ಷಿ:
ಹನ್ನೆರಡು ಮುಖದ ರುದ್ರಾಕ್ಷಿ ಭಗವಾನ್ ಸೂರ್ಯನಾರಾಯಣನ ಸ್ವರೂಪವೆಂದು ತಿಳಿಯಲಾಗುತ್ತದೆ (ದ್ವಾದಶಾದಿತ್ಯರು) . ಈ ರುದ್ರಾಕ್ಷಿಯ ಬೆಳೆಯೂ ಸ್ವಲ್ಪ ಕಡಿಮೆ ಪ್ರಮಾಣದಲ್ಲಿರುತ್ತದೆ. ಈರುದ್ರಾಕ್ಷಿಯನ್ನು ಧರಿಸುವುದರಿಂದ ಮನುಷ್ಯನಲ್ಲಿ ತೇಜಸ್ಸು ಹೆಚ್ಚುತ್ತದೆ ಹಾಗೂ ಪ್ರಭಾವ ಶಾಲೀ ವ್ಯಕ್ತಿತ್ವವುಂಟಾಗುತ್ತದೆ ಎಂದು ಹೇಳುತ್ತಾರೆ. ಇದರ ಬೆಲೆಯೂ ಹೆಚ್ಚು.

ತ್ರಯೋದಶಿ ಮುಖಿ ರುದ್ರಾಕ್ಷಿ:
ಹದಿಮೂರುಮುಖದ ರುದ್ರಾಕ್ಷಿ ಇಂದ್ರ ದೇವನ ಸ್ವರೂಪ ಎಂದು ಭಾವಿಸುತ್ತಾರೆ. ಈ ರುದ್ರಾಕ್ಷಿಯ ಧಾರಣೆಯಿಂದ ಆತ್ಮ ಶಾಂತಿ ದೊರೆಯು ವುದು ಶಾರೀರಿಕ ಶಾಂತಿ ದೊರೆಯುವುದು.

ಚತುರ್ದಶ ಮುಖದ ರುದ್ರಾಕ್ಷಿ:
ಹದಿನಾಲ್ಕು ಮುಖದ ರುದ್ರಾಕ್ಷಿ ಆಂಜನೇಯನ ಸ್ವರೂ ವೆಂದು ತಿಳಿಯಲಾಗುತ್ತದೆ. ಇದು ಸಹಾ ಕಡಿಮೆ ಪ್ರಮಾಣದಲ್ಲಿ ದೊರೆಯುವುದು. ಈ ರುದ್ರಾಕ್ಷಿ ಧಾರಣೆಯಿಂದ ರೋಗಗಳಿಂದ ಮುಕ್ತಿ ದೊರೆಯುತ್ತದೆ- ಮನುಷ್ಯ ನಿರೂಗಿಯಾಗಿ ಬಲಶಾಲಿಯಾಗುತ್ತಾನೆ ಎಂದು ಹೇಳುತ್ತಾರೆ. ಬೆಲೆಯೂ ಹೆಚ್ಚು.

Comments are closed.