ಕರಾವಳಿ

“ತುಳು ಚಿತ್ರ ಶತೋತ್ಸವ” ಕಾರ್ಯಕ್ರಮಕ್ಕೆ ಚಾಲನೆ : ಸಂಜೆ ಸಮಾರೋಪಕ್ಕೆ ಆಗಮಿಸಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರ ದಂಡು

Pinterest LinkedIn Tumblr

ಮಂಗಳೂರು, ಜನವರಿ,27: ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಆಶ್ರಯದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಹಮ್ಮಿಕೊಳ್ಳಲಾದ “ತುಳು ಚಿತ್ರ ಶತೋತ್ಸವ” ಕಾರ್ಯಕ್ರಮಕ್ಕೆ ರವಿವಾರ ಬೆಳಗ್ಗೆ ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಗಣೇಶ್ ರಾವ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತುಳು ಅಕೆಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಹಿರಿಯ ಚಿತ್ರ ನಿರ್ಮಾಪಕ ರಿಚರ್ಡ್ ಕ್ಯಾಸ್ಟಲಿನೋ, ಹಿರಿಯ ಕಲಾವಿದ ವಿ.ಜಿ.ಪಾಲ್ ಮುಂತಾದವರು ಅಥಿತಿಗಳಾಗಿ ಪಾಲ್ಗೊಂಡಿದ್ದರು.

ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಗೌರವಾಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಪಮ್ಮಿ ಕೊಡಿಯಾಲ್‌ಬೈಲ್, ಕಾರ್ಯಾಧ್ಯಕ್ಷ ಬಿ.ಆಶೋಕ್ ಕುಮಾರ್, ಸಂಘದ ಸ್ಥಾಪಕ ಹರೀಶ್ ಕೊಡ್ಪಾಡಿ, ಸ್ಥಾಪಕಾಧ್ಯಕ್ಷೆ ಅಶ್ವಿನಿ ಕೋಟ್ಯಾನ್, ಉಪಾಧ್ಯಕ್ಷ ಮೋಹನ್ ಕೊಪ್ಪಲ ಕದ್ರಿ, ಜತೆ ಕಾರ್ಯದರ್ಶಿ ಪ್ರಜ್ವಲ್ ಅತ್ತಾವರ, ತುಳುಚಿತ್ರ ಶತೋತ್ಸವ ಸ್ವಾಗತ ಸಮಿತಿ ಸಂಚಾಲಕ ಆರ್. ಧನರಾಜ್, ಪ್ರಧಾನ ಸಂಚಾಲಕ ಪ್ರಕಾಶ್ ಶೆಟ್ಟಿ, ದ.ಕ.ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮ :

ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ, ಬಳಿಕ 11 ಗಂಟೆಗೆ ನಿರ್ಮಾಪಕರು, ನಿರ್ದೇಶಕರು ಹಾಗೂ ಚಿತ್ರಮಂದಿರ ಮಾಲಕರು, ವ್ಯವಸ್ಥಾಪಕರಿಗೆ ಅಭಿನಂದನೆ.. 12 ಗಂಟೆಗೆ ತುಳುಚಿತ್ರದ ಬೆಳವಣಿಗೆ ಬಗ್ಗೆ ಸಂವಾದ, 2 ಗಂಟೆಗೆ ವಿದ್ಯಾರ್ಥಿಗಳಿಗೆ ಚಿತ್ರರಂಗದ ಬಗ್ಗೆ ರಸಪ್ರಶ್ನೆ, 3 ಗಂಟೆಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಸಂಜೆ ಸಮಾರೋಪ :

ಸಂಜೆ 4 ಗಂಟೆಗೆ ತುಳುಚಿತ್ರಗಳ ರಸಮಂಜರಿ, 5 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 6 ಗಂಟೆಗೆ ತುಳು ಚಿತ್ರ ತಾರೆಯರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ತುಳು ಚಿತ್ರ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸೇರಿ 100 ಮಂದಿಯನ್ನು ಗಣ್ಯರ ಸಮ್ಮುಖದಲ್ಲಿ ನ್ಮಾನಿಸಲಾಗುವುದು.

ಸಂಜೆ 6.30ಕ್ಕೆ ಕರ್ನಾಟಕ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘದ ಉದ್ಘಾಟನೆ ನಡೆಯಲಿದೆ. ಈ ವೇಳೆ ಕರ್ನಾಟಕ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಅಧ್ಯಕ್ಷರಾಗಿ ಅಯ್ಕೆಯಾಗಿರುವ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಆರ್.ಧನರಾಜ್ ಅವರು ಅಧಿಕಾರ ವಹಿಸಲಿರುವರು. ಬಳಿಕ ಸಂಜೆ 7 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕೋಸ್ಟಲ್‌ವುಡ್‌ನ ಕಲಾವಿದರ ಜೊತೆಯಲ್ಲಿ ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿರುವರು.

Comments are closed.