ಕರಾವಳಿ

ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವು

Pinterest LinkedIn Tumblr

ಕುಂದಾಪುರ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.

ತ್ರಾಸಿ ಸಮೀಪದ ಹೊಸಪೇಟೆ ನಿವಾಸಿ ಕೃಷ್ಣ ಖಾರ್ವಿ (52) ಮೃತಪಟ್ಟ ಮೀನುಗಾರ.

ಮುಂಜಾನೆಯ ಸಮಯ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದ ಕೃಷ್ಣ ಖಾರ್ವಿ ಕೆಲಸದ ವೇಳೆ ಸಮುದ್ರಕ್ಕೆ ಬಿದ್ದಿದ್ದು ತಕ್ಷಣ ಅವರನ್ನು ಮೇಲೆಕ್ಕೆತ್ತಿದ ಇತರ ಮೀನುಗಾರರು ಬದುಕಿಸುವ ಪ್ರಯತ್ನ ಮಾಡಿದರೂ ಕೂಡ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು.

ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶವ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಶವವನ್ನು ರವಾನಿಸಲಾಗಿದೆ.

Comments are closed.