ಕರಾವಳಿ

ನಗರದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಸೆರೆ : 1.100 ಕಿಲೋ ಗಾಂಜಾ ವಶ

Pinterest LinkedIn Tumblr

ಮಂಗಳೂರು : ನಗರಲ್ಲಿ ಯುವಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಈ ಹಿಂದೆ ಹಲವು ಗಾಂಜಾ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಯ ಬಳಿ ಇದ್ದ ಸುಮಾರು 1.100 ಕಿಲೋ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಬಂದರು ಅನ್ಸಾರಿ ಕ್ರಾಸ್ ರಸ್ತೆ ನಿವಾಸಿ ಅಬ್ದುಲ್ ರಹೀಂ @ ಗೂಡ್ಸ್ ರಹೀಂ @ ಕಂಡಿ ರಹೀಂ (40) ಬಂಧಿತ ಆರೋಪಿ. ದಿನಾಂಕ: 30-01-2019 ರಂದು ಮಂಗಳೂರು ನಗರದ ಹಳೇ ಬಂದರಿನ ಪೋರ್ಟ್ ರಸ್ತೆಯಲ್ಲಿ ಆರೋಪಿಯನ್ನು ಕಾರ್ಯಾಚರಣೆ ಮೂಲಕ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ಸುಮಾರು 44,000/- ಮೌಲ್ಯದ 1.100 ಕೆಜಿ ಗಾಂಜಾ, 2 ಮೊಬೈಲ್ ಫೋನ್ ಗಳು ಹಾಗೂ ನಗದು ರೂ. 2,250/- ಹೀಗೆ ಒಟ್ಟು ರೂ. 47,750/- ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಈತನು ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್ ಗಳಲ್ಲಿ ಮಾಡಿ ಅದನ್ನು ಮಂಗಳೂರು ನಗರದ ಕಾಲೇಜು ಹಾಗೂ ವಿದ್ಯಾಸಂಸ್ಥೆಗಳ ಬಳಿಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ, ಪಣಂಬೂರು , ಬರ್ಕೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ತಲಾ ಒಂದು ಪ್ರಕರಣ ಹೀಗೆ ಒಟ್ಟು 11 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಗೂಂಡಾ ಕಾಯ್ದೆಯಡಿಯಲ್ಲಿ ಸುಮಾರು ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್, ಐಪಿಎಸ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಯವರಾದ ಹನುಮಂತರಾಯ, ಹಾಗೂ ಅಪರಾಧ /ಸಂಚಾರ ವಿಭಾಗದ ಡಿಸಿಪಿಯವರಾದ ಶ್ರೀಮತಿ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಶ್ರೀ ಎಂ.ಎ ಉಪಾಸೆ, ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಯವರಾದ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹೆಚ್ ಡಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು

Comments are closed.